ಪಾಪಿಗಳ ಅನ್ಯಾಯ ಕಂಡು ವೇದಿಕೆಯಲ್ಲಿ ಗಳಗಳನೇ ಅತ್ತ ಸೌಜನ್ಯಗಳ ಮುಗ್ಧ ತಾಯಿ

 | 
Bd

ಕುಮಾರಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡಬೇಕು, ಸೌಜನ್ಯ ಪ್ರಕರಣದಲ್ಲಿ ಮರು ತನಿಖೆ ಆಗಬೇಕೆಂದು ಆಗ್ರಹಿಸಿ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ನಡೆಯುತ್ತಿದ್ದಂತೆ ವೇದಿಕೆ ಕೆಳಗಿಳಿದ ಸೌಜನ್ಯ ಅವರ ತಾಯಿ ಕುಸುಮಾವತಿ ಸಭಿಕರೆದುರು ಸೆರಗು ಒಡ್ಡಿ ನ್ಯಾಯಕ್ಕೆ ಬೇಡಿದ್ದಾರೆ. 

ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗಿದ್ದು ಸಾವಿರಾರು ಪ್ರತಿಭಟನಾಕಾರರು ಸೇರಿದ್ದಾರೆ. ಪ್ರತಿಭಟನೆಗೆ ಸೇರಿದವರನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಮಗಳಿಗೆ ನ್ಯಾಯ ಕೊಡಿಸಲು ಇಡಿ ದೇಶವೇ ಕೂಡಿ ಬಂದಿದೆ. ನನ್ನ ಮಗಳಿಗೋಸ್ಕರ ಇಷ್ಟೊಂದು ಜನ ಸೇರಿದ್ದೀರಿ. ನಮ್ಮ ಮಗುವಿಗೋಸ್ಕರ ನ್ಯಾಯ ಕೇಳಲು ಇಂದು ನಮಗೆ ಪರ್ಮಿಷನ್ ಕೊಟ್ಟಿಲ್ಲ. 

ಬಜರಂಗದಳದವರೊಂದಿಗೆ ಅಣ್ಣಪ್ಪನಲ್ಲಿ ನ್ಯಾಯ ಕೇಳಲು ಹೋಗಿದ್ದೆ…ನನ್ನನ್ನ ಒಳಗೆ ಹೋಗಲು ಬಿಟ್ಟಿಲ್ಲ. ನನ್ನನ್ನು ಒಂದು ಗಂಟೆ ಹೊರಗಡೆ ಕಾಯಿಸಿದ್ದಾರೆ. ಆ ಅಣ್ಣಪ್ಪ ಸ್ವಾಮಿ ಮಂಜುನಾಥ ಸ್ವಾಮಿಯನ್ನ ನಾನು ಇಲ್ಲಿ ನೋಡುತ್ತಿದ್ದೇನೆʼ ಎಂದು ಭಾವನಾತ್ಮಕವಾಗಿ ನುಡಿದರು.
ಖಂಡಿತಾ ನಾನು ಗಟ್ಟಿಯಾಗಿ ಇದ್ದೇನೆ. ಇಷ್ಟು ಜನರ ಶಕ್ತಿ ನನ್ನಲ್ಲಿ ತುಂಬಿದೆ. ಅದು ಎಷ್ಟು ಬಾರಿ ನನ್ನ ಮಗಳನ್ನು ಅತ್ಯಾಚಾರ ಮಾಡಿದ್ರೋ. ನನ್ನ ಮಗಳು ಎಷ್ಟು ನೋವು ತಿಂದಳೋ ಏನೋ. ಧೀರಜ್ ಜೈನ್, ಮಲ್ಲಿಕ್ ಜೈನ್ , ಹರ್ಷೇಂದ್ರ ಕುಮಾರ್ ಮಗ ನಿಶ್ಚಲ್ ಜೈನ್ ಸೇರಿದಂತೆ ಐದಾರು ಜನ ನನ್ನ ಮಗಳನ್ನು ಅತ್ಯಾಚಾರ ಮಾಡಿದ್ದಾರೆ. 

ನ್ಯಾಯ ಸಿಗುತ್ತೆ, ಅತ್ಯಾಚಾರಿಗಳು ಸಿಕ್ತಾರೆ ಎಂಬ ನಂಬಿಕೆ ಇದೆ. ಅಮ್ಮ ನನ್ನನ್ನು ಬದುಕಿಸು ಎಂಬ ಕೂಗು ನನಗೆ ಈಗಲೂ ಕೇಳಿಸುತ್ತೆ” ಎಂದು ಗದ್ಗದಿತರಾಗಿ ಕುಸುಮಾವತಿ ಹೇಳಿದ್ದಾರೆ. ಅತ್ಯಾಚಾರ ಮಾಡಿ ಕಾಡಲ್ಲಿ ಬಿಸಾಡಿದ್ದಾರೆ. ಅತ್ಯಾಚಾರ ಮಾಡಿ ಜೀವ ಸಹಿತ ಬಿಟ್ಟಿದ್ರು ನನಗೆ ತೊಂದರೆ ಇರ್ತಿರ್ಲಿಲ್ಲ.. ಆದರೆ ಕೊಂದೇ ಬಿಟ್ಟರು. ಇವತ್ತು ನಿಮ್ಮ ಕಾಲ ಬುಡಕ್ಕೆ ಬಂದು ನ್ಯಾಯ ಕೇಳುತ್ತಿದ್ದೇನೆ ಎಂದು ಕುಸುಮಾವತಿ ಹೇಳುತ್ತಿದ್ದಂತೆ ನೆರೆದವರ ಕಣ್ಣಲ್ಲೂ ನೀರು ಜಿನುಗುತ್ತಿತ್ತು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.