ಬಹುಬೇಡಿಕೆಯ ನಟನಿಗೆ ಹೃದ.ಯಾಘಾತದ, ಸ್ಪಂದನಾ ಬಳಿಕ ಮತ್ತೊಂದು ಕಣ್ಣೀರ ಘಟನೆ

 | 
ಗಿಗಿಗಿ

ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುತ್ತಿದೆ. ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. 

ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎನ್ನಲಾಗಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ತಂದೆ ಬ್ಯಾಂಕ್‌ ಜನಾರ್ದನ್‌ ಅವರ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯ ವೈದ್ಯರು ಆಂಜಿಯೋಗ್ರಾಮ್‌ ಚಿಕಿತ್ಸೆ ನೀಡುತ್ತಿದ್ದಾರೆ. ಐಸಿಯುನಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬ್ಯಾಂಕ್‌ ಜನಾರ್ದನ್‌ ಅವರ ಪುತ್ರ ಗುರುಪ್ರಸಾದ್‌ ಮಾಹಿತಿ ಹಂಚಿಕೊಂಡಿದ್ದಾರೆ.

ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.

ಬ್ಯಾಂಕ್ ಜನಾರ್ದನ್ ಜನಿಸಿದ್ದು 1949ರಲ್ಲಿ. ಅವರು 1991ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಜಗಜಾಂತರ’ ಅವರ ನಟನೆಯ ಮೊದಲ ಸಿನಿಮಾ. ಆ ಬಳಿಕ ‘ಗೌರಿ ಗಣೇಶ’, ‘ತರ್ಲೆ ನನ್ಮಗ’, ‘ಶ್’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. +ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.