ಅವಕಾಶ ಕೊಡುತ್ತೇನೆ ಅಂತ ಮುಟ್ಟಬಾರದ ಜಾಗ ಮುಟ್ಟಿ ತೊಂದರೆ ಕೊಡುತ್ತಿದ್ದ, ಅನುಪಮಾ ಗೌಡ

 | 
Nnj
ಚಿತ್ರರಂಗದವರ ಬದುಕೇ ಹಾಗೆ. ಅಂದುಕೊಂಡಷ್ಟು ಸುಲಭವಲ್ಲ. ಕಣ್ಣಿಗೆ ಕಾಣುವಷ್ಟು ಸಸಾರವು ಅಲ್ಲ.ರಾಜ್ಯಪ್ರಶಸ್ತಿ ವಿಜೇತ ನಟಿ ಅನುಪಮಾ ಗೌಡ ಕಿರುತೆರೆಯಲ್ಲಿ ಕೂಡ ಜನಪ್ರಿಯತೆ ಗಳಿಸಿದ್ದಾರೆ. ತಂದೆ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಆರಂಭದಲ್ಲಿ ಸಹ ಕಲಾವಿದೆಯಾಗಿ ಅನುಪಮಾ ಚಿತ್ರರಂಗಕ್ಕೆ ಬಂದಿದ್ದರು. ದರ್ಶನ್ ನಟನೆಯ ಲಂಕೇಶ್ ಪತ್ರಿಕೆ ಚಿತ್ರದಲ್ಲಿ ಸಣ್ಣ ಪಾತ್ರ ಮಾಡಿದ್ದರು. ಬಳಿಕ ನಟಿಸುವುದು ನಿಲ್ಲಿಸಿದ್ದರು.
ಅನೇಕ ಚಿಕ್ಕವಯಸ್ಸಿನಲ್ಲೇ ಹೆಣ್ಣು ಮಕ್ಕಳು ಲೈಂಗಿಕ ಕಿರುಕುಳ ಅನುಭವಿಸಿರುವ ಸಾಕಷ್ಟು ಉದಾಹರಣೆಗಳಿವೆ. ಸಾಕಷ್ಟು ನಟಿಯರು ಕೂಡ ತಮಗೆ ಇಂತಾದೊಂದು ಕಹಿ ಅನುಭವ ಆಗಿರುವ ಬಗ್ಗೆ ಮಾತನಾಡಿದ್ದಾರೆ. ನಟಿ ಅನುಪಮಾ ಗೌಡ ತಾವು ಇದೇ ರೀತಿ ಕಿರುಕುಳ ಎದುರಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಆ ದಿನಗಳಲ್ಲಿ ಎಲ್ಲಿಯೂ ಹೇಳಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ. ರಾಜೇಶ್ ಗೌಡ ಯೂಟ್ಯೂಬ್ ಚಾನಲ್ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.
ಬಡತನವು ಅಲ್ಲದ ಸಿರಿತನವು ಇಲ್ಲದ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿ ಬೆಳೆದ ಅನುಪಮಾ ಗೌಡ ಜೀವನದಲ್ಲಿ ಎದುರಿಸಿದ ಕಷ್ಟಗಳ ಬಗ್ಗೆ ಮಾತನಾಡಿದ್ದಾರೆ. ಚಿತ್ರರಂಗದ ನಂಟು ಬೆಳೆದಿದ್ದು ಹೇಗೆ ಎನ್ನುವುದನ್ನು ಕೂಡ ವಿವರಿಸಿದ್ದಾರೆ. ಮೊದಲಿಗೆ ಲಂಕೇಶ್ ಪತ್ರಿಕೆ ಚಿತ್ರದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡಿದ್ದಾರೆ. ಚಿಕ್ಕಂದಿನಲ್ಲೇ ನಾನು ಮನೆ ಕೆಲಸಕ್ಕೆ ಹೋಗುತ್ತಿದ್ದೆ. ನಮ್ಮ ಅಮ್ಮನಿಗೆ ಜ್ಯೂನಿಯರ್ ಆರ್ಟಿಸ್ಟ್ ಒಬ್ಬರು ಪರಿಚಯ ಇದ್ದರು. ಆಕೆ ಬಂದು ನಮ್ಮ ಅಮ್ಮನ ಬಳಿ ಕೇಳಿ ನನ್ನನ್ನು ಸಿನಿಮಾಗಳಲ್ಲಿ ನಟಿಸೋಕೆ ಕರೆದುಕೊಂಡು ಹೋಗಿದ್ದರು.
ಸಿನಿಮಾಗಳಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ ನಟಿಸೋಕೆ ದಿನಕ್ಕೆ 100 ರೂಪಾಯಿ ಕೊಡುತ್ತಿದ್ದರು. ಆಗ ನಾನು 7 ನೇ ತರಗತಿಯಲ್ಲಿದ್ದೆ. ಕೆಲ ಸಿನಿಮಾ, ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದೆ. ಲಂಕೇಶ್ ಪತ್ರಿಕೆ ಚಿತ್ರದ ಕ್ಲೈಮ್ಯಾಕ್ಸ್‌ನ ಸಣ್ಣ ದೃಶ್ಯದಲ್ಲಿ ನಟಿಸಿದ್ದೆ. ವಿಶೇಷ ಚೇತನ ಹುಡುಗಿಯ ಪಾತ್ರ. ದರ್ಶನ್ ಸರ್ ಜೊತೆ ತೆರೆ ಹಂಚಿಕೊಂಡೆ. ಕ್ಲೈಮ್ಯಾಕ್ಸ್‌ನಲ್ಲಿ ನನ್ನ ಪಾತ್ರದಿಂದ ಚಿತ್ರಕ್ಕೆ ತಿರುವು ಸಿಗುತ್ತದೆ. ಅಂತಹ ಪಾತ್ರ ಎಂದು ಅನುಪಮಾ ಗೌಡ ನೆನಪಿಸಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.