ಫಸ್ಟ್ ಟೈಮ್ ಸ್ಟೇಜ್ ಮೇಲೆ ಮಾತಾಡಿದ ಅಪ್ಪು ಮುದ್ದಿನ ಮಗಳು ವಂದಿತಾ, ಫಿದಾ ಆದ ಕನ್ನಡಿಗರು
ಅಪ್ಪು ಈ ಹೆಸರಲ್ಲಿ ಅದೇನೋ ಆತ್ಮೀಯ ಭಾವವಿದೆ. ಅವರಿಲ್ಲದೆ 3 ವರ್ಷಗಳು ಕಳೆದಿವೆ ಆದರೂ ಎಲ್ಲರ ಮನದಲ್ಲಿ ಮಾತ್ರ ಅವರು ನೆಲೆಸಿದ್ದಾರೆ. ಎಲ್ಲ ಸಿನಿಮಾಗಳ ಮೊದಲು ಅವರನ್ನು ನೆನಪಿಸಿ ಕೊಂಡು ಗೌರವ ಸ್ಮರಣಾರ್ಥ ಸಲ್ಲಿಸುವುದು ಸಾಮಾನ್ಯವಾಗಿದೆ. ಇದೀಗ ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ "ಯುವ" ಚಿತ್ರದ "ಅಪ್ಪುಗೆ" ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಯವ, ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ - ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ.
ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ ಅಪ್ಪುಗೆ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು. ವಂದಿತಾ ಚಿತ್ರ ತಂಡಕ್ಕೆ ಆಲ್ ದ ಬೆಸ್ಟ್ ಎಂದಿದ್ದಾರೆ.
ಇನ್ನು ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಇನ್ನು, ಮಾರ್ಚ್ 21 ರಂದು ಯುವ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.