ಕನ್ನಡಿಗರಿಗೆ ಸಿಹಿಸುದ್ದಿ ಅರ್ಜುನ್ ಸರ್ಜಾ ಮನೆಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ
ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರ ಪುತ್ರಿ ನಟಿ ಐಶ್ವರ್ಯಾ ಸರ್ಜಾ ಅವರು ಚೆನ್ನೈನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮಿಳಿನ ಲೆಜೆಂಡರಿ ಆಕ್ಟರ್ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಜೊತೆ ಐಶ್ವರ್ಯಾ ಎಂಗೇಜ್ ಆಗಿದ್ದಾರೆ.
ಹಲವು ವರ್ಷಗಳ ಪ್ರೀತಿಗೆ ಇಂದು ಐಶ್ವರ್ಯಾ- ಉಮಾಪತಿ ಉಂಗುರದ ಮುದ್ರೆ ಒತ್ತಿದ್ದಾರೆ. ಕುಟುಂಬದ ಸಮ್ಮತಿ ಪಡೆದು ಅದ್ದೂರಿಯಾಗಿ ಈ ಜೋಡಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಅದ್ದೂರಿ ನಿಶ್ಚಿತಾರ್ಥದಲ್ಲಿ ಧ್ರುವ ಸರ್ಜಾ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಡಿಸೆಂಬರ್‌ನಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ತಂಬಿ ರಾಮಯ್ಯ ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮತ್ತು ಪೋಷಕ ನಟ. ಹಲವು ವರ್ಷಗಳಿಂದಲೂ ತಂಬಿ ರಾಮಯ್ಯ ತಮಿಳು ಸಿನಿಮಾಗಳಲ್ಲಿ ನಟಿಸುತ್ತಾ ಬಂದಿದ್ದಾರೆ. ಉಮಾಪತಿ ರಾಮಯ್ಯ ಹಾಗೂ ಐಶ್ವರ್ಯಾ ಸರ್ಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು ಎನ್ನಲಾಗಿದೆ.
ಇದೀಗ ಹಿರಿಯರ ಒಪ್ಪಿಗೆ ಪಡೆದು ವಿವಾಹ ಮಾಡಿಕೊಳ್ಳಲು ಸಜ್ಜಾಗಿದ್ದು ಇಂದು ಕುಟುಂಬದ ಹಿರಿಯರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ ಐಶ್ವರ್ಯಾ ವಿವಾಹವಾಗಲಿರುವ ಉಮಾಪತಿ ರಾಮಯ್ಯ ಸಹ ಸಿನಿಮಾ ನಟರೇ ಆಗಿದ್ದಾರೆ. 2017ರಲ್ಲಿ ನಾಯಕ ನಟನಾಗಿ ಎಂಟ್ರಿ ಕೊಟ್ಟ ಉಮಾಪತಿ ರಾಮಯ್ಯ, ಈವರೆಗೆ ನಾಲ್ಕು ಸಿನಿಮಾಗಳಲ್ಲಿ ಮಾತ್ರವೇ ನಟಿಸಿದ್ದಾರೆ.
ಸರ್ವೈವರ್ ತಮಿಳ್ ಎಂಬ ರಿಯಾಲಿಟಿ ಶೋನಲ್ಲಿಯೂ ಭಾಗವಹಿಸಿದ್ದರು. ಆದರೆ ಅವರಿಗೆ ದೊಡ್ಡ ಯಶಸ್ಸು ಈವರೆಗೆ ಲಭ್ಯವಾಗಿಲ್ಲ. ಇನ್ನು ನಿಶ್ಚಿತಾರ್ಥದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ನಿಶ್ಚಿತಾರ್ಥ ಸಮಾರಂಭವನ್ನು ಎರಡು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮಾಡಲಾಗಿದೆ. ಇನ್ನು ಪ್ರೇಮ ಬರಹ ಚಿತ್ರದ ಮೂಲಕ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಪರಿಚಿತರಾದರು. ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್‌ಗೆ ನಾಯಕಿಯಾಗಿ ನಟಿಸಿದ್ದರು. ಮಗಳ ಮೊದಲ ಸಿನಿಮಾಗೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.