ಎರಡು ಸಾವಿರ ಹಣ ನೋಡಿದ ತಕ್ಷಣ ಸಿದ್ದು ಸಿಎಮ್ ಕುರ್ಚಿಯಲ್ಲಿ ಆಗೇ ಇರಲಿ ಎಂದ ಅಜ್ಜಿಯರು

 | 
D

ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಗ್ಯಾರೆಂಟಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಗ್ರೀನ್ ಸಿಗ್ನಲ್ ನೀಡಲಾಗಿದೆ. ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಯೋಜನೆ ಇದಾಗಿದ್ದು, ಕಾಂಗ್ರೆಸ್ ಸರ್ಕಾರ ಚುನಾವಣಾ ಸಮಯದಲ್ಲಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಲಾಗಿದ್ದಂತೆ ಐದು ಯೋಜನೆಗಳಲ್ಲಿ ಇದು ಕೂಡ ಒಂದಾಗಿತ್ತು.

ಸಾಕಷ್ಟು ವಿಳಂಬದ ಬಳಿಕ ಕೊನೆಗೂ ಗೃಹಲಕ್ಷ್ಮೀ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ಕೊಟ್ಟಿದೆ. ಕರ್ನಾಟಕದಾದ್ಯಂತ ಸುಮಾರು 11,000 ಕೇಂದ್ರಗಳಲ್ಲಿ ನೋಂದಣಿ ಮಾಡಿಸಲಾಗಿದ್ದ ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಈ ಯೋಜನೆಯಿಂದ ತಿಂಗಳಿಗೆ 2000 ಅಕೌಂಟ್‌ಗೆ ಜಮೆ ಆಗಿದೆ. ಸಿಎಂ ತವರು ಜಿಲ್ಲೆ ಮೈಸೂರಿನಿಂದಲೇ ಈ ಬಹು ನಿರೀಕ್ಷಿತ ಯೋಜನೆಗೆ ಚಾಲನೆ ನೀಡಲಾಗಿದೆ.

ಬೆಳಗ್ಗೆ 11 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೃಹಲಕ್ಷ್ಮಿಗೆ ಚಾಲನೆ ನೀಡಿದ್ದಾರೆ. ಕುಟುಂಬ ನಿರ್ವಹಣೆಯ ಹೊಣೆಹೊತ್ತ ನಾಡಿನ ಕೋಟಿಗೂ ಅಧಿಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ಬೆಲೆಯೇರಿಕೆಯ ಸಂಕಷ್ಟಗಳ ನಡುವೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಅವರ ಕನಸನ್ನು ನನಸಾಗಿಸುವ ಗೃಹಲಕ್ಷ್ಮಿ ಯೋಜನೆ ಜಾರಿಗೆ ಕ್ಷಣಗಣನೆ ಆರಂಭಗೊಂಡಿದೆ. 

ಮಹಿಳಾ ಸಬಲೀಕರಣದ ನಮ್ಮ ಪ್ರಯತ್ನಕ್ಕೆ ಕೈಜೋಡಿಸುವಂತೆ ಸಿಎಂ ಮನವಿ ಮಾಡಿದ್ದಾರೆ. ಇನ್ನು ಈ ಯೋಜನೆಯಿಂದ ಸಂತೋಷಗೊಂಡ ಮಹಿಳೆಯರು ಬಹುಪರಾಕ್ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಚೆನ್ನಾಗಿರಲಿ ಎಂದು ಹಾರೈಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.