ಉಡುಪಿ ಕಾಪು ಅಮ್ಮನವರ ಬಳಿ ಮಂಡಿಯೂರಿ ಕೈಮುಗಿದ ಅಶ್ವಿನಿ ಪುನೀತ್ ರಾಜ್‍ಕುಮಾರ್

 | 
Jjh
ಸ್ಯಾಂಡಲ್​ವುಡ್ ನಟ ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕಾಪು ದೇವಾಲಯಕ್ಕೆ ಭೇಟಿ ಕೊಟ್ಟಿದ್ದಾರೆ. ಉಡುಪಿಯ ಕಾಪು ತಾಲೂಕಿನಲ್ಲಿರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಅವರು ಭೇಟಿ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶ ಉತ್ಸವ ಸಂಭ್ರಮದಿಂದ ನಡೆದಿತ್ತು.
ಇತ್ತೀಚಿಗೆ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಇವರು ಕಾಪು ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತೀಚೆಗಷ್ಟೇ ಬ್ರಹ್ಮಕಲಶ ಉತ್ಸವ ಪೂರೈಸಿರುವ ಹೊಸ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದಿದ್ದಾರೆ. ಮಾರಿಯಮ್ಮನ ನವದುರ್ಗ ಲೇಖನ ಪುಸ್ತಕವನ್ನು ಪಡೆದಿದ್ದಾರೆ. 
ಇನ್ನು ಈಗಾಗಲೇ ಹೇಳಿದಂತೆ ಮಾರಿಯಮ್ಮನ ನವದುರ್ಗ ಲೇಖನ ಪುಸ್ತಕವನ್ನು ಕೂಡಾ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಡೆದುಕೊಂಡಿದ್ದಾರೆ. ನವದುರ್ಗ ಶ್ಲೋಕಗಳನ್ನು ಬರೆಯುವ ಸಂಕಲ್ಪ ಮಾಡಿದ್ದು ದೇಗುಲದ ವತಿಯಿಂದ ಗೌರವಾರ್ಪಣೆ ಮಾಡಲಾಗಿದೆ. ಇನ್ನು ಕೆಲ ದಿನಗಳ ಹಿಂದಷ್ಟೇ ಬಾಲಿವುಡ ನಟಿ ಶಿಲ್ಪಾ ಶೆಟ್ಟಿ ಅವರು ಉಡುಪಿ ಜಿಲ್ಲೆ ಕಾಪು ತಾಲೂಕಿನ ಶ್ರೀ ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿದ್ರು. 
ಇತ್ತೀಚಿಗೆ ಚಿತ್ರತಂಡದವರ ದಂಡೇ ಕರಾವಳಿ ಕಡೆ ಮುಖ ಮಾಡಿದೆ. ಒಬ್ಬರ ಮೇಲೊಬ್ಬರಂತೆ ಟೆಂಪಲ್ ರನ್ ಮಾಡ್ತಿದ್ದಾರೆ. ಇದಕ್ಕೆ ಕಾರಣ ಉಡುಪಿಯಲ್ಲಿ ನಿರ್ಮಾಣವಾಗಿರುವ ಕಾಪು ಹೊಸ ಮಾರಿಗುರಿ ಭವ್ಯಮಂದಿರ. ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಈ ನೂತನ ದೇವಸ್ಥಾನವನ್ನ ನಿರ್ಮಾಣ ಮಾಡಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub