ರಾಘು ಪತ್ನಿ ಮುಂದೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಕಣ್ಣೀರು ನಿಲ್ಲುತ್ತಿಲ್ಲ

 | 
ಕಕಪ

ಸ್ಪಂದನಾ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಸ್ಪಂದನಾ ಮೃತದೇಹ ನೋಡ್ತಿದಂತೆ ಅಪ್ಪು ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಪ್ಪು ಪತ್ನಿ ಮತ್ತು ಪುತ್ರಿಯರು ಸ್ಪಂದನಾ ನಿಧನಕ್ಕೆ ಕಣ್ಣೀರಿಟ್ಟಿದ್ದಾರೆ. ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ ಕುಟುಂಬಕ್ಕೆ ಶಾಕ್ ಕೊಟ್ಟಿದೆ. 

ಸ್ಪಂದನಾ ಅಂತಿಮ ದರ್ಶನದಲ್ಲಿ ಪುನೀತ್ ಪತ್ನಿ, ವಿನಯ್, ಯುವರಾಜ್‌ಕುಮಾರ್, ಪುನೀತ್ ಮಕ್ಕಳಾದ ದೃತಿ ಮತ್ತು ವಂದನಾ ಭಾಗಿಯಾಗಿದ್ದಾರೆ. ಬಿಕ್ಕಿ ಬಿಕ್ಕಿ ಅಳ್ತಿರೋ ಅಶ್ವಿನಿ ಮತ್ತು ಅಪ್ಪು ಮಕ್ಕಳಿಗೆ ಶ್ರೀಮುರಳಿ ಸಂತೈಸಿದ್ದಾರೆ. ಸದ್ಯ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹಾಗೂ ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದು, ವಿಜಯ ರಾಘವೇಂದ್ರ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಹರಿಶ್ಚಂದ್ರಘಾಟ್‌ನಲ್ಲಿ ಮಧ್ಯಾಹ್ನ 2 ಗಂಟೆಗೆ ಬರ್ನಿಂಗ್‌ಗೆ ಸ್ಲಾಟ್ ಬುಕ್ಕಿಂಗ್ ಮಾಡಲಾಗಿದೆ. 
ಈಡಿಗ ಸಮುದಾಯದ ಸಂಪ್ರದಾಯದಂತೆ ಪೂಜೆ ಪುನಸ್ಕಾರ ನಡೆಸಿ ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಅಂತ್ಯಕ್ರಿಯೆಗೆ ಪೂಜೆ ಪುನಸ್ಕಾರ ಹಿನ್ನೆಲೆ ಬಿಬಿಎಂಪಿಯಿಂದ ಕೂಡ ಸ್ವಚ್ಛತಾ ಕಾರ್ಯ ಮಾಡಲಾಗಿದೆ. 

ಒಟ್ಟಿನಲ್ಲಿ ಪ್ರೀತಿಸಿದ ಜೀವಗಳ ಕಳೆದುಕೊಂಡು ಅಶ್ವಿನಿ ಪುನೀತ್ ರಾಜಕುಮಾರ್ ಸೊರಗಿದ್ದಾರೆ. ಇದೀಗ ವಿಜಯ್ ರಾಘವೇಂದ್ರ ಕೂಡ ಹೇಗೆ ಬದುಕುತ್ತಾರೆ ಎನ್ನುವುದು ನಿಜಕ್ಕೂ ಹಲವರನ್ನು ಕಾಡುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.