ಕುಡುಕರಿಗೆ ಕಹಿಸುದ್ದಿ; ಹೊಸ ನಿಯಮ ಜಾರಿಗೊಳಿಸಿದ ಸಿದ್ದರಾಮಯ್ಯ ಸರ್ಕಾರ

 | 
Hj

ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 59 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸರ್ಕಾರ ಸದ್ಯ ಸಂಪನ್ಮೂಲ ಕೇಂದ್ರೀಕರಣಕ್ಕೆ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ ಎನ್ನಲಾಗಿದೆ. ಹೌದು ಮದ್ಯ ಪ್ರಿಯರಿಗೆ ಸಧ್ಯದಲ್ಲೇ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. 

ಬಜೆಟ್​​ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರ ಮದ್ಯದ ದರ ಪರಿಷ್ಕರಣೆ ಮಾಡೋದಕ್ಕೆ ಮುಂದಾಗಿದ್ದು, ಅಬಕಾರಿ ಇಲಾಖೆಯ ಪ್ರಸ್ತಾವನೆಗೆ ಸರ್ಕಾರ ಅಸ್ತು ಎನ್ನುವ ಸಾಧ್ಯತೆ ಇದೆ.ಫೆಬ್ರವರಿ 16ರಂದು ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ, ನೆರೆ ರಾಜ್ಯಗಳ ಮದ್ಯದ ಬೆಲೆಗೆ ಅನುಗುಣವಾಗಿ ಬೆಲೆ ಪರಿಷ್ಕರಿಸೋದಾಗಿ ಘೋಷಿಸಿದ್ದರು. ಅದರಂತೆ ಈಗ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಲೋಕಸಭಾ ಚುನಾವಣೆ ಇದ್ದ ಕಾರಣ ಇಷ್ಟು ದಿನ ಬೆಲೆ ಏರಿಕೆ ಪ್ರಸ್ತಾವನೆಗೆ ಕೈ ಹಾಕಿರಲಿಲ್ಲ. ಈಗ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಮದ್ಯ ಪ್ರಿಯರಿಗೆ ಶಾಕ್ ಕೊಡೋದಕ್ಕೆ ಮುಂದಾಗಿದೆ.ಸಾಮಾನ್ಯವಾಗಿ ಪ್ರತಿವರ್ಷ ಅಬಕಾರಿ ಇಲಾಖೆ ಮದ್ಯದ ದರ ಪರಿಷ್ಕರಣೆ ಮಾಡುತ್ತದೆ. ಸರ್ಕಾರಗಳು ಆದಾಯ ಹೆಚ್ಚಳದ ಉದ್ದೇಶದಿಂದ ಮದ್ಯದ ದರವನ್ನು ಹೆಚ್ಚು ಮಾಡಲುತ್ತಲೇ ಬರುತ್ತಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 59 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸರ್ಕಾರ ಸದ್ಯ ಸಂಪನ್ಮೂಲ ಕೇಂದ್ರೀಕರಣಕ್ಕೆ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ ಎನ್ನಲಾಗಿದೆ.ಈ ಹಿಂದೆ 2023ರ ಜೂನ್ ನಲ್ಲಿ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. 

ಸದ್ಯ ಮದ್ಯದ ದರದಲ್ಲಿ ಪ್ರತಿ ಬಾಟಲ್ ಮೇಲೆ 10 ರಿಂದ 20 ರೂಪಾಯಿ ಹೆಚ್ಚಳ ಆಗುವ ನಿರೀಕ್ಷೆ ಇದ್ದು, ಬಿಯರ್ ಹಾಗೂ ಹಾರ್ಡ್ ಡ್ರಿಂಕ್ಸ್ ಬೆಲೆಯಲ್ಲೂ ಹೆಚ್ಚಳ ಆಗುವ ಸಾಧ್ಯತೆ ಇದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.