ಬಿಗ್ಬಾಸ್ ಸ್ಫಧಿ೯ ಗೆ ಬಾರಿ ಹೃದಯಾಘಾತ, ಯಾರೂ ಅಂತ ಗೊತ್ತಾದ್ರೆ ಪಕ್ಕಾ ಶಾ ಕ್ ಆಗ್ತೀರಾ
Oct 24, 2024, 07:49 IST
|

ಈಗಾಗಲೇ 60 ವರ್ಷ ದಾಟಿದರೂ ಯಾವ ಸ್ಪರ್ಧಿಗಳಿಗೂ ಕಮ್ಮಿಯಿಲ್ಲ ಎಂಬಂತೆ ಟಫ್ ಫೈಟ್ ಕೊಡುತ್ತಿದ್ದ ವೈಲ್ಡ್ ಕಾರ್ಡ್ ಎಂಟ್ರಿ ಗಂಗಮ್ಮಗೆ ಸೋಮವಾರ ರಾತ್ರಿ ಹೃದಯಾಘಾತವಾಗಿದೆ ಎಂಬ ಸುದ್ದಿ ಹಬ್ಬಿದೆ. ಶೋನಲ್ಲಿರುವಾಗಲೇ ಈ ಘಟನೆ ನಡೆದಿದ್ದು, ಕೂಡಲೇ ಅವರಿಗೆ ವೈದ್ಯಕೀಯ ನೆರವು ಒದಗಿಸಲಾಗಿದೆ. ಸದ್ಯ ಅವರು ಪ್ರಾಣಪಾಯದಿಂದ ಪಾರಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ.
ಅಂದಹಾಗೆ, ‘ಮೈ ವಿಲೇಜ್ ಶೋ’ ಮೂಲಕ ಯೂಟ್ಯೂಬ್‌ನಲ್ಲಿ ಹಾಸ್ಯ ಭರಿತ ವಿಡಿಯೋಗಳಿಂದ ಖ್ಯಾತಿ ಗಳಿಸಿದ್ದ ಗಂಗವ್ವ ಈ ಹಿಂದೆ ‘ಬಿಗ್ ಬಾಸ್ ಸೀಸನ್ 4’ರಲ್ಲಿ ಕೂಡ ಸ್ಪರ್ಧಿಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಅರ್ಧಕ್ಕೆ ಶೋ ತೊರೆದಿದ್ದರು. ಇದೀಗ ಮತ್ತೆ ತೆಲುಗಿನ ಸೀಸನ್ 8ರಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ರಂಜಿಸುತ್ತಿದ್ದಾರೆ.
ಎರಡು ವಾರಗಳ ಹಿಂದೆ ಗಂಗವ್ವ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ರು. ಗಂಗವ್ವ ಅವರ ಮಾತು, ನಡವಳಿಕೆ ಮೂಲಕವೇ ಹಲವಾರು ಅಭಿಮಾನಿಗಳನ್ನ ಗಳಿಸಿದ್ದರು.ಅನಿರೀಕ್ಷಿತವಾಗಿ ರೀ ಎಂಟ್ರಿ ಕೊಟ್ಟ ಗಂಗವ್ವ ಕೆಲ ದಿನಗಳಿಂದ ಮನೆಯೊಳಗೆ ತುಂಬಾ ಡಲ್ ಆಗಿದ್ದರು ಎನ್ನಲಾಗಿದೆ.
ಇದರಿಂದ ನಿನ್ನೆ ರಾತ್ರಿ ಗಂಗವ್ವ ಅವರಿಗೆ ಹೃದಯಾಘಾತವಾಗಿದೆ ಎಂಬ ವರದಿಗಳು ನಿನ್ನೆಯಿಂದ ವೈರಲ್ ಆಗುತ್ತಿದೆ. ಇದರಿಂದ ಮನೆಯಲ್ಲಿದ್ದ ಸ್ಪರ್ಧಿಗಳು ಭಯಗೊಂಡಿದ್ದು, ಅಲ್ಲಿನ ವೈದ್ಯಕೀಯ ತಂಡ ಗಂಗವ್ವ ಅವರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸಿದೆ ಎನ್ನಲಾಗಿದೆ. ಈ ಬಗ್ಗೆ ಈಗ ಸುದ್ದಿ ಕೂಡ ವೈರಲ್ ಆಗಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,17 Jul 2025