ಕನ್ನಡಿಗರ‌ ನೆಚ್ಚಿನ ಬಿಗ್ ಬಾಸ್ ಸ್ಪರ್ಧಿಗೆ ಸ್ತ‌ ನ ಕ್ಯಾನ್ಸರ್;

 | 
Hu

ಬಾಲಿವುಡ್ ಕಿರುತೆರೆಯಲ್ಲಿ ಹೆಸರುವಾಸಿಯಾಗಿರುವ ನಟಿ ಹಿನಾ ಖಾನ್ ಅವರು ಆಘಾತಕಾರಿ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ಹೌದು, ಹಿನಾ ಖಾನ್ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಸ್ವತಃ ಈ ವಿವಚಾರವನ್ನು ಹೇಳಿಕೊಂಡಿರುವ ಹಿನಾ ಖಾನ್, ಈ ಸವಾಲನ್ನು ನಾನು ಜಯಿಸುತ್ತೇನೆ, ನಾನು ಆದಷ್ಟು ಬೇಗ ಗುಣವಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಲ್ಲರಿಗೂ ನಮಸ್ಕಾರ. ಈಚೆಗೆ ಕೇಳಿಬಂದ ಕೆಲವು ವದಂತಿಗಳನ್ನು ಪರಿಹರಿಸಲು ನಾನು ಬಯಸುತ್ತೇನೆ. ನನ್ನನ್ನು ಪ್ರೀತಿಸುವ ಮತ್ತು ಕಾಳಜಿ ವಹಿಸುವ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಈಚೆಗೆ ನನಗೆ ಮೂರನೇ ಹಂತದ ಸ್ತನ ಕ್ಯಾನ್ಸರ್ ಇರುವುದು ಗೊತ್ತಾಯಿತು ಎಂದು ಹಿನಾ ಖಾನ್ ತಿಳಿಸಿದ್ದಾರೆ.

ಈ ಕಾಯಿಲೆ ಇದ್ದಾಗಿಯೂ ನಾನು ಉತ್ತಮವಾಗಿದ್ದೇನೆ. ನಾನು ಬಲಶಾಲಿ ಮತ್ತು ಈ ರೋಗವನ್ನು ಜಯಿಸಲು ನಿಜವಾಗಿಯೂ ಬದ್ಧನಾಗಿದ್ದೇನೆ ಎಂದು ಎಲ್ಲರಿಗೂ ಭರವಸೆ ನೀಡಲು ನಾನು ಬಯಸುತ್ತೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ. ಇದರಿಂದ ಇನ್ನಷ್ಟು ಬಲವಾಗಿ ಹೊರಹೊಮ್ಮಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ಸಿದ್ಧಳಿದ್ದೇನೆ ಎಂದು ಹಿನಾ ಖಾನ್ ಹೇಳಿಕೊಂಡಿದ್ದಾರೆ.

ಈ ಸಮಯದಲ್ಲಿ ನನ್ನ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದವನ್ನು ನಾನು ಆಳವಾಗಿ ಪ್ರಶಂಸಿಸುತ್ತೇನೆ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಧನಾತ್ಮಕವಾಗಿ ಇರುತ್ತೇನೆ. 

ಸರ್ವಶಕ್ತನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿರುತ್ತೇನೆ ಎಂದು ನಾನು ನಂಬಿದ್ದೇನೆ. ದಯವಿಟ್ಟು ನಿಮ್ಮ ಪ್ರಾರ್ಥನೆ, ಆಶೀರ್ವಾದ ಮತ್ತು ಪ್ರೀತಿ ನನ್ನ ಮೇಲೆ ಇರಲಿ ಎಂದು ಹಿನಾ ಖಾನ್ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.