ಕೊನೆಗೂ ಬಿಗ್ ಬಾಸ್ ವಿನ್ನರ್ ರಿವೀಲ್, ಕುಣಿದು ಕುಪ್ಪಳಿಸಿದ ವಿನಯ್ ಗೌಡ

 | 
Hz

ಬಹುನಿರೀಕ್ಷಿತ ಬಿಗ್ಬಾಸ್ ಕನ್ನಡ ಸೀಸನ್ 10 ಬಹುದೊಡ್ಡ ಯಶಸ್ಸಿನೊಂದಿಗೆ ಅಂತಿಮ ಹಂತಕ್ಕೆ ಬಂದು ತಲುಪಿದೆ. ಇಂದು ಕಿಚ್ಚ ಸುದೀಪ್ ಒಬ್ಬರ ಕೈಯನ್ನು ಎತ್ತಿ ಹಿಡಿಯಲಿದ್ದಾರೆ. ಬಿಗ್ಬಾಸ್ ಮನೆಯೊಳಗೆ ರಾರಾಜಿಸುತ್ತಿರುವ ಕಪ್ ಅವರ ಕೈ ಸೇರಲಿದೆ. ಈ ಫಿನಾಲೆ ವಾರದಲ್ಲಿ ಬಿಗ್ಬಾಸ್ ಮನೆಯೊಳಗೆ ಸಂಗೀತಾ, ವಿನಯ್, ಕಾರ್ತಿಕ್, ಪ್ರತಾಪ್, ತುಕಾಲಿ ಸಂತೋಷ್, ವರ್ತೂರು ಸಂತೋಷ್ ಹೀಗೆ ಒಟ್ಟು ಆರು ಸದಸ್ಯರು ಇದ್ದಾರೆ.

ಅಷ್ಟೇ ಅಲ್ಲ, ಮಿಡ್ ವೀಕ್ ಎಲಿಮಿನೇಷನ್ ಇರುವುದಿಲ್ಲ ಎಂದು ನಿನ್ನೆಯ ಎಪಿಸೋಡಿನಲ್ಲಿ ಬಿಗ್ಬಾಸ್ ಹೇಳಿದ್ದಾರೆ. ಹಾಗಾಗಿ ಕುತೂಹಲ ಇನ್ನಷ್ಟು ಗರಿಗೆದರಿದೆ. ಈ ಸಲದ ಬಿಗ್ಬಾಸ್ ಸೀಸನ್ನ ಟಾಪ್ 5ನಲ್ಲಿ ಯಾರು ಇರುತ್ತಾರೆ ಎಂದು ಎವಿಕ್ಟೆಡ್ ಕಂಟೆಸ್ಟೆಂಟ್ಸ್ಗೆ ಕೇಳಲಾದ ಪ್ರಶ್ನೆಗೆ ಅವರು ನೀಡಿದ ಉತ್ತರದಲ್ಲಿ ಅತಿ ಹೆಚ್ಚು ಬಾರಿ ಉಲ್ಲೇಖಿತರಾದವರು ಸಂಗೀತಾ ಶೃಂಗೇರಿ. ಒಟ್ಟೂ ಒಂಬತ್ತು ಜನ ಎಲಿಮಿನೇಟೆಡ್ ಸ್ಪರ್ಧಿಗಳು ಜಿಯೊ ಸಿನಿಮಾ ಸಂದರ್ಶನದಲ್ಲಿ ಸಂಗೀತಾ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. 

ಕಾರ್ತಿಕ್ ಮಹೇಶ್ ಅವರು ಆರು ಬಾರಿ ಉಲ್ಲೇಖಿತರಾಗಿದ್ದಾರೆ. ತುಕಾಲಿ ಸಂತೋಷ್ ಕೂಡ ಆರು ಸಲವೇ ಉಲ್ಲೇಖಿತರಾಗಿ ಕಾರ್ತಿಕ್ ಸಮಕ್ಕೆ ನಿಂತಿದ್ದಾರೆ. ವಿನಯ್ ಕೂಡ ಪದೇ ಪದೇ ಉಲ್ಲೇಖಿತಗೊಂಡಿರುವ ಸ್ಪರ್ಧಿಗಳಲ್ಲಿ ಒಬ್ಬರು. ನಮ್ರತಾ, ಮೈಕಲ್, ಪವಿ, ಸ್ನೇಹಿತ್ ಎಲ್ಲವೂ ವಿನಯ್ ಹೆಸರನ್ನು ಉಲ್ಲೇಖಿಸಿದ್ದಾರೆ. ಇನ್ನು ಬಹಳ ಜನರ ಮೆಚ್ಚುಗೆಗೆ ಪಾತ್ರವಾಗಿದ್ದು ಕಾರ್ತೀಕ್ ಅವರು ಎಂಬುದಾಗಿ ತಿಳಿದು ಬಂದಿದೆ.

ಅಸಮರ್ಥರಾಗಿ ಒಳಗೆ ಹೋಗಿದ್ದರೂ, ಮೊದಲ ವಾರದಿಂದಲೇ ಮನೆಯ ಕೇಂದ್ರಬಿಂದುಗಳಲ್ಲಿ ಒಬ್ಬರಾಗಿದ್ದವರು ಸಂಗೀತಾ ಶೃಂಗೇರಿ. ನಂತರದ ದಿನಗಳಲ್ಲಿಯೂ ಟಾಸ್ಕ್ಗಳಲ್ಲಾಗಲಿ, ಮನೆಯ ಕೆಲಸಗಳಲ್ಲಾಗಲಿ, ಚಟುವಟಿಕೆಗಳಲ್ಲಾಗಲಿ, ನಾಮಿನೇಷನ್ ಪ್ರಕ್ರಿಯೆಯಲ್ಲಾಗಲಿ ಸಂಗೀತಾ ಹೆಸರು ಮುಂಚೂಣಿಯಲ್ಲಿ ಇದ್ದೇ ಇರುತ್ತಿತ್ತು. ಜಿದ್ದು, ಜಗಳ, ಸ್ಟ್ರಾಟಜಿ ಎಲ್ಲದರಲ್ಲಿಯೂ ಸಂಗೀತಾ ಮುಂದಿರುತ್ತಿದ್ದರು.

ರಂಜನೆ ಮತ್ತು ತಂತ್ರಗಾರಿಕೆ ಎರಡರ ಮಿಶ್ರಣದಂತಿರುವ ತುಕಾಲಿ ಸಂತೋಷ್ ತಮ್ಮ ಜಾಣತನದಿಂದಲೇ ಬಿಗ್ಬಾಸ್ ಮನೆಯೊಳಗೆ ಸ್ಥಾನವನ್ನು ಭದ್ರ ಮಾಡಿಕೊಳ್ಳುತ್ತ ಬಂದರು. ವರ್ತೂರು ಸಂತೋಷ್ ಜೊತೆಗಿನ ಅವರ ಸ್ನೇಹಸಂಬಂಧವಂತೂ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಲವಲವಿಕೆಯ ವ್ಯಕ್ತಿತ್ವ, ಎಲ್ಲದರಲ್ಲಿಯೂ ಪಾಲ್ಗೊಳ್ಳುವ ಉತ್ಸಾಹ, ಸ್ನೆಹಪರ, ಭಾವುಕ ಮನಸ್ಸು ಈ ಎಲ್ಲವೂ ಕಾರ್ತಿಕ್ ಮಹೇಶ್ ಅವರನ್ನು ಮನೆಯ ಬಹುತೇಕ ಸದಸ್ಯರ ಮನಸಲ್ಲಿ ಸ್ಥಾನ ಪಡೆಯುವಂತೆ ಮಾಡಿದ್ದವು. ಕಾರ್ತಿಕ್ ಅವರನ್ನು ಫೇಕ್ ಎಂದು ಉಳಿದ ಸದಸ್ಯರು ಉಲ್ಲೇಖಿಸಿದ್ದು ತುಂಬವೇ ವಿರಳ. ಇದು ಅವರ ವ್ಯಕ್ತಿತ್ವದ ಇನ್ನೊಂದು ಆಯಾಮವನ್ನು ಸೂಚಿಸುವಂತಿದೆ. 

ಐ ಆಮ್ ವಿಲನ್ ಎನ್ನುತ್ತಲೇ ಒಳಹೋದ ವಿನಯ್ ಗೌಡ ಮನೆಯೊಳಗಿನ ಹಲವರ ಪಾಲಿಗೆ ಹೀರೊ ಆಗಿದ್ದೂ ಸತ್ಯ. ಒಂದು ಹಂತದಲ್ಲಿಯಂತೂ ಸ್ವತಃ ಸುದೀಪ್ ಅವರೇ, ನಮ್ಮ ಕಣ್ಣಿಗೆ ಒಬ್ಬರು‘ ಮಾತ್ರ ಫಿನಾಲೆ ವೀಕ್ಗೆ ಹೋಗುವ ಕಂಟೆಸ್ಟೆಂಟ್ ಆಗಿ ಕಾಣಿಸುತ್ತಿದ್ದಾರೆ. ಉಳಿದವರು ಅವರನ್ನು ಗೆಲ್ಲಿಸಲು ಪ್ರಯತ್ನಿಸುತ್ತಿರುವ ಹಾಗೆ ಕಾಣಿಸುತ್ತಿದೆ ಎಂದೇ ನೇರವಾಗಿ ಹೇಳಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.