ವತೂ೯ರ್ ಸಂತೋಷ್ ಅರೆ.ಸ್ಟ್ ಹಿಂದೆ ಅತಿ ದೊಡ್ಡ ಪಿತೂರಿ, ಅದೇನು ಗೊತ್ತಾ

 | 
Hshshw

 ಬಿಗ್​ಬಾಸ್  ಸೀಸನ್ 10ರ ಮನೆಯೊಳಗೆ ಇದ್ದ ರೈತ ವರ್ತೂರು ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹುಲಿ ಉಗುರಿನ ಪೆಂಡೆಂಟ್  ಧರಿಸಿದ ಆರೋಪದ ಮೇಲೆ ವರ್ತೂರು ಸಂತೋಷ್ ಅವರನ್ನು ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಸವಿವ ಈಶ್ವರ್ ಖಂಡ್ರೆ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನು ಅಡಿಯಲ್ಲಿ ಯಾರೇ ಆದರೂ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಬಿಗ್ ಬಾಸ್ ಸ್ಪರ್ಧಿಯಾಗಿರುವ ವರ್ತೂರ್​ ಸಂತೋಷ್ ಕುಮಾರ್ ತಮ್ಮ ಜ್ಯುವೇಲರಿಯಲ್ಲಿ ಹುಲಿಯ ಉಗುರುಗಳನ್ನ ಹಾಕಿಕೊಂಡಿದ್ದಾರೆ ಅಂತ ದೂರು ಬಂದಿದೆ. ನಮ್ಮ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ಕಾನೂನಿನ ಕ್ರಮ ಜರುಗಿಸಿಲಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ.

ಸಂತೋಷ್ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವುದರ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರು. ಯಾರೇ ಆದರೂ ಕಾನೂನು ರೀತಿಯ ಕ್ರಮ ಜರುಗಿಸಲು ನಾನು ಸೂಚನೆ ನೀಡಿದ್ದೇನೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಾರೆ, ನಂತರ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ವಿಚಾರಣೆ ವೇಳೆ ವರ್ತೂರ್ ಸಂತೋಷ್ ಹಲವು ಮಾಹಿತಿಗಳನ್ನು ಅರಣ್ಯ ಅಧಿಕಾರಿಗಳ ಮುಂದೆ ಹೇಳಿದ್ದಾರೆ ಎನ್ನುವ ಮಾಹಿತಿ ಇದೆ. ತನ್ನ ಬಳಿ ಇರುವುದು ಒರಿಜಿನಲ್ ಹುಲಿ ಉಗುರು, ನಾನು ವ್ಯಕ್ತಿಯೊಬ್ಬನಿಂದ ಹುಲಿ ಉಗುರು ಖರೀದಿಸಿದ್ದೆ ಎಂದು ಅವರು ಅರಣ್ಯಾಧಿಕಾರಿಗಳ ಎದುರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಹುಲಿ ಉಗುರಿನ ಮೂಲವನ್ನು ಅರಣ್ಯಾಧಿಕಾರಿಗಳು ಹುಡುಕುತ್ತಿದ್ದಾರೆ.
ಇನ್ನು ಇದನ್ನೆಲ್ಲ ನೋಡುತ್ತಿದ್ದರೆ ವರ್ತೂರ್ ಸಂತೋಷ್ ವಿರುದ್ಧ ಬಲವಾದ ಪಿತೂರಿಯೇ ನಡೆದಿದೆ ಎನ್ನಲಾಗುತ್ತಿದೆ.

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.