ವರ ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಮದುವೆ ಬೇಡ ಎಂದ ವಧು, ನೂರಾರು ಜನರ ಮುಂದೆ ಮಾನ ಕಳೆದುಕೊಂಡ ಪೋಷಕರು

 | 
ರ

ಆ ಮನೆಯಲ್ಲಿ ಮಗಳ ಮದುವೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸಂಬಂಧಿಕರು, ಸ್ನೇಹಿತರೆಲ್ಲರೂ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು. ಮದುವೆ ಮಂಟಪದಲ್ಲಿ ಶಾಸ್ತ್ರಗಳು ಎಲ್ಲವೂ ಅಚ್ಚು ಕಟ್ಟಾಗಿ ನಡೆಯುತ್ತಿತ್ತು. ಇನ್ನೇನು ವರ ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಅಲ್ಲೊಂದು ದೊಡ್ಡ ರಾದ್ದಾಂತವೇ ನಡೆದುಹೋಗಿದೆ. ವರ ತಾಳಿ ಕಟ್ಟುವ ವೇಳೆ ನನಗೆ ಮದುವೆ ಬೇಡ ಎಂದು ವಧು ಹೇಳಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ಕೊರಟಗೆರೆ ತಾಲೂಕಿನ ಕೊಳಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಕೊಳಾಲ ಗ್ರಾಮದ ಕೆ.ಸಿ.ಎನ್. ಕನ್ವೆನ್ಷನ್ ಹಾಲ್​ನಲ್ಲಿ ಮದುವೆ ನಡೆಯುತ್ತಿತ್ತು. ವರ ವೆಂಕಟೇಶ್ ಜೊತೆ ದಿವ್ಯಾ ಎಂಬಾಕೆಯ ಮದುವೆ ನಡೆಯುತ್ತಿತ್ತು. ವೆಂಕಟೇಶ್‌ ತಾಳಿ ಕಟ್ಟುವ ವೇಳೆ ದಿವ್ಯಾ ಮದುವೆ ಬೇಡ ಎಂದು ಸಿನಿಮೀಯ ರೀತಿಯಲ್ಲಿ ಹೇಳಿದ್ದು, ಮದುವೆ ಅರ್ಧಕ್ಕೆ ಮುರಿದುಬಿದ್ದಿದೆ. ತಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಹೀಗಾಗಿ ನನಗೆ ಮದುವೆ ಬೇಡ ಎಂದು ದಿವ್ಯಾ ಕಲ್ಯಾಣ ಮಂಟಪದಿಂದ ಹೊರನಡೆದಿದ್ದಾಳೆ.

ರಿಸೆಪ್ಷನ್​ನಲ್ಲಿ ದಿವ್ಯಾ, ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದಳು. ಆದರೆ, ಮರುದಿನ ಬೆಳಗ್ಗೆ ಮುಹೂರ್ತಕ್ಕೆ ಬರುತ್ತಿದ್ದಂತೆ ಮದುವೆ ಬೇಡ ಎಂದಿದ್ದಾಳೆ. ಮದುವೆ ಬೇಡ ಎಂದು ಉಲ್ಟಾ ಹೊಡೆಯುತ್ತಿದ್ದಂತೆ ಕಲ್ಯಾಣ ಮಂಟಪದಲ್ಲಿ ಗದ್ದಲ ಉಂಟಾಗಿತ್ತು. ಈ ವೇಳೆ ಎರಡೂ ಕಡೆಯವರಿಂದ ಮಾತಿನ ಚಕಮಕಿ ನಡೆದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬಳಿಕ ಪೊಲೀಸರ ಸಮ್ಮುಖದಲ್ಲಿ ಎರಡು ಕುಟುಂಬಗಳ ಸಂಧಾನ ನಡೆಯಿತು. 

ಮದುವೆಯ ಖರ್ಚು ಭರಿಸುವುದಾಗಿ ವಧುವಿನ ಕುಟುಂಬಸ್ಥರು ಒಪ್ಪಿಕೊಂಡಿದ್ದು, ನಂತರ ವಧುವಿನ ಪೋಷಕರು, ದಿವ್ಯಾ ಇಷ್ಟಪಟ್ಟ ಯುವಕನ ಜೊತೆಗೆ ಆಕೆಯನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟಿನಲ್ಲಿ ಈ ಘಟನೆ ಹಿಂದಿ ಸಿನಿಮಾ ತ್ರೀ ಇಡಿಯಟ್ಸ್ ನೆನಪಿಸುವಂತಿತ್ತು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.