ಮುದ್ದಾದ ಹೆಂಡತಿಯ ಡಿವೋರ್ಸ್ ಆಟಕ್ಕೆ ಬಾರಿ ಮೊತ್ತದ ಆಸ್ತಿ ಬರೆದುಕೊಟ್ಟ ಚಹಲ್
Feb 19, 2025, 07:32 IST
|

ಆದ್ರೆ ಈ ವದಂತಿ ನಡುವೆಯೇ ಧನಶ್ರೀ ವರ್ಮಾ ಅವರಿಂದ ವಿಚ್ಚೇಧನ ಪಡೆಯಲು ಯುಜ್ವೇಂದ್ರ ಚಹಲ್ 60 ಕೋಟಿ ರೂ. ಜೀವನಾಂಶ ನೀಡಲಿದ್ದಾರೆ ಎಂದು ವರದಿಯಾಗಿದೆ.ಸ್ಟಾರ್ ದಂಪತಿಗಳ ನಡುವೆ ಈಗಾಗಲೇ ಮಾತುಕತೆ ನಡೆದಿದ್ದು, ಅದರಂತೆ ಯುಜ್ವೇಂದ್ರ ಚಹಲ್ ಅವರು ಧನಶ್ರೀ ವರ್ಮಾಗೆ 60 ಕೋಟಿ ರೂ. ಜೀವನಾಂಶ ನೀಡಲು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಆದರೆ ಈ ಸುದ್ದಿಯನ್ನು ಚಹಲ್ ಈವರೆಗೆ ಖಚಿತಪಡಿಸಿಲ್ಲ.
ಅತ್ತ ಇಂತಹದೊಂದು ಸುದ್ದಿಗೆ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆಯನ್ನು ಸಹ ನೀಡಿಲ್ಲ.ಇದಕ್ಕೂ ಮುನ್ನ ವಿಚ್ಛೇದನ ವದಂತಿ ನಡುವೆ ಧನಶ್ರೀ ವರ್ಮಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದರು. ನನಗೆ ಮತ್ತು ನನ್ನ ಕುಟುಂಬಕ್ಕೆ ಕಳೆದ ಕೆಲ ದಿನಗಳು ತುಂಬಾ ಕಠಿಣ ದಿನಗಳಾಗಿವೆ. ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷವನ್ನು ಹರಡುವ ಟ್ರೋಲ್ಗಳಿಂದ ನನ್ನ ಗೌರವವನ್ನು ಕೊಲ್ಲುವ ಪ್ರಯತ್ನ ಮಾಡುತ್ತಿದ್ದಾರೆ.
ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಪುರಾವೆಗಳಿಲ್ಲದಿದ್ದರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ ಎಂದು ಧನಶ್ರೀ ವರ್ಮಾ ಬರೆದುಕೊಂಡಿದ್ದರು.ಈ ಪೋಸ್ಟ್ ವೈರಲ್ ಬೆನ್ನಲ್ಲೇ ಮತ್ತೆ ಧನಶ್ರೀ ವರ್ಮಾ ಹಾಗೂ ಯುಜ್ವೇಂದ್ರ ಚಹಲ್ ನಡುವಣ ಸಂಬಂಧದ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023