ನನಿಗೆ ಚಿಕ್ಕ ವಯಸ್ಸಿನಲ್ಲಿ ಸರಿಯಾಗಿ ‌ಹೊಡೆದಿದ್ದಾರೆ, ಸಂದರ್ಶನವೊಂದರಲ್ಲಿ ಮೌನ ಮುರಿದ ಚೈತ್ರ ಆಚಾರ್

 | 
Nz
ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ. ಇಲ್ಲಿ ಒಳ್ಳೇಯವರು ಇದ್ದಾರೆ. ಕೆಟ್ಟವರು ಇದ್ದಾರೆ.ಇನ್ನು ಈ ವೇದಿಕೆಯ ಮೂಲಕವೇ ಸಿನಿ ತಾರೆಯರು ಹೆಚ್ಚು ಪ್ರಚಲಿತಕ್ಕೆ ಬರುತ್ತಿರುವ ಜೊತೆಗೆ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸಾಧನವನ್ನಾಗಿಯೂ ಹೆಚ್ಚು ಬಳಸಿಕೊಳ್ಳುತ್ತಿದ್ದಾರೆ. 
ಆದರೆ ಇದನ್ನೇ ದುರುಪಯೋಗ ಪಡಿಸಿಕೊಂಡು, ಕೆಲವರು ಟ್ರೋಲ್ ಹೆಸರಿನಲ್ಲಿ ತಮ್ಮ ತೆವಲು ತೀರಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಸೆಲೆಬ್ರಿಟಿಗಳನ್ನ ಟಾರ್ಗೆಟ್ ಮಾಡಿ ಅವರ ಕಮೆಂಟ್ ಸೆಕ್ಷನ್ ಗೆ ಬಂದು ಕೆಟ್ಟಾ ಕೊಳಕು ಮಾತುಗಳನ್ನಾಡುತ್ತಾರೆ. ಕೆಲವೊಮ್ಮೆ ಈ ಮಾತು ಕಲಾವಿದರ ಬದುಕನ್ನ ಹಿಂಡಿ ಹಿಪ್ಪೆಯಾಗಿಸಿಬಿಡುತ್ತೆ. ಖಿನ್ನತೆಗೆ ದೂಡುತ್ತೆ. ಚೈತ್ರಾ ಆಚಾರ್ ಬದುಕಿನಲ್ಲಿಯೂ ಇಂಥಹದ್ದೊಂದು ದಿನ ಎದುರಾಗಿತ್ತು. ಮಾತು ಮನೆ ಕೆಡಿಸಿತು ಎನ್ನುವಂತೆ ಅದೆಲ್ಲೋ ಕುಳಿತು ಮಾತನಾಡಿದ ವ್ಯಕ್ತಿಯ ಮಾತು ಚೈತ್ರಾಗೆ ಮಾನಸಿಕ ಆಘಾತವನ್ನುಂಟು ಮಾಡಿತ್ತು.
ಹೌದು, ಚೈತ್ರಾ ಆಚಾರ್​, ನಾಯಕಿ ಕಂ ಗಾಯಕಿ. ಇವರು ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ಅನ್ನುವುದರಲ್ಲಿ ದೂಸ್ರಾ ಮಾತಿಲ್ಲ. ಎಂಥ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬಬಲ್ಲ ಸಾಮರ್ಥ್ಯ ಹೊಂದಿರುವ ನಟಿ ಇವರು. ಇದಕ್ಕೆ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಇತ್ತೀಚಿನ ಉದಾಹರಣೆ.ಯಾರ ಬಳಿಯೂ ಅಭಿನಯದ ಅಕ್ಷರಾಭ್ಯಾಸ ಮಾಡದೇ, ಯಾವ ಗಾಡ್ ಫಾದರ್ ಸಹಾಯ ಇಲ್ಲದೇ, ಕನ್ನಡ ಚಿತ್ರರಂಗಕ್ಕೆ ಬಂದು ತನ್ನ ಕಾಲ ಮೇಲೆ ನಿಂತಿರುವ ಚೈತ್ರಾ ಆಚಾರ್ 2021ರಲ್ಲಿ ಗರುಡ ಗಮನ ವೃಷಭ ವಾಹನ ಚಿತ್ರದ ಸೋಜುಗಾದ ಸೂಜಿ ಮಲ್ಲಿಗೆ ಹಾಡಿಗೆ ಅತ್ಯುತ್ತಮ ಗಾಯಕಿ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದ್ದರು.
ಅದು ಸೈಮಾ ಅಂಥಹ ದೊಡ್ಡ ವೇದಿಕೆಯಲ್ಲಿ. ಅವರ ಬದುಕಿಗೆ ಬ್ರೇಕ್ ನೀಡಿದ್ದೆ ಆ ಹಾಡು .ಇನ್ನೂ ಇದು ಚೈತ್ರಾ ವೃತ್ತಿ ಬದುಕಿನ ಮೊದಲ ಬಹು ದೊಡ್ಡ ಪ್ರಶಸ್ತಿ. ಹೀಗಾಗಿ ಇದು ಕನಸಾ-ನನಸಾ ಎಂಬ ಗೊಂದಲ ಚೈತ್ರಾ ಅವರಲ್ಲಿ ಇತ್ತು. ಇನ್ನೂ ದೊಡ್ಡ ವೇದಿಕೆ, ದೊಡ್ಡ ಸಮಾರಂಭ, ಗಣ್ಯ ವ್ಯಕ್ತಿಗಳು.. ಈ ಕಾರಣದಿಂದ ಚೈತ್ರಾ ಎಕ್ಸಾಯಟ್ಮೆಂಟ್ ಕೂಡ ಹೆಚ್ಚಿತ್ತು. ಆದರೆ ಈ ಎಲ್ಲ ಸಂಭ್ರಮ.. ಸಡಗರಕ್ಕೆ ಕೊಳ್ಳಿ ಇಟ್ಟಿದ್ದು ಮಾತ್ರ ವ್ಯಕ್ತವಾದ ಅಭಿಪ್ರಾಯಗಳು. ಕಮೆಂಟ್ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub