ಚಂದನ್ ಶೆಟ್ಟಿ ಪೂರ್ತಿ ಆಸ್ತಿ ವಿವೇದಿತಾಗೆ; ವಕೀಲರಿಂದ ಸ್ಪೋ ಟಕ ನ್ಯೂಸ್
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದಿದ್ದಾರೆ. ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ. ಇದೀಗ ಗಾಯಕ ಚಂದನ್ ಶೆಟ್ಟಿ- ನಿವೇದಿತಾ ಗೌಡ ಮಾಜಿ ದಂಪತಿಯಾಗಿದೆ.ಚಂದನ್ ಹಾಗೂ ನಿವೇದಿತಾ ಪರ ವಕೀಲರು ಇಬ್ಬರ ಡಿವೋರ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ್ದಾರೆ.
ಖಾಸಗಿ ಮಾಧ್ಯಮದ ಸಂದರ್ಶನದಲ್ಲಿ ಮಾತಾಡಿದ ವಕೀಲರಾದ ಅನಿತಾ, ಚಂದನ್ ಹಾಗೂ ನಿವೇದಿತಾ ವಿಚ್ಛೇದನದ ಬಗ್ಗೆ ತಪ್ಪಾಗಿ ತೋರಿಸಲಾಗ್ತಿದೆ ಎಂದು ಹೇಳಿದ್ರು ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಆ ರೀತಿ ಇಲ್ಲ. ಇಬ್ಬರು ಒಪ್ಪಿಕೊಂಡ್ರೆ ತಕ್ಷಣವೇ ವಿಚ್ಛೇದನ ಪಡೆಯಬಹುದು. ಇಬ್ಬರೂ ಅವರ ನಿರ್ಧಾರವನ್ನು ಯೋಚಿಸಿಯೇ ತೆಗೆದುಕೊಂಡಿದ್ದಾರೆ. ಸೆಲೆಬ್ರಿಟಿ ಅನ್ನೋ ಕಾರಣಕ್ಕೆ ಟಾರ್ಗೆಟ್ ಮಾಡಬಾರದು ಎಂದು ಲಾಯರ್ ಅನಿತಾ ಹೇಳಿದ್ದಾರೆ.
ಈಗಾಗಲೇ ಪರಸ್ಪರ ಒಪ್ಪಿಗೆ ಮೇರೆಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ. ನಟಿ ನಿವೇದಿತಾ ಗೌಡ ಯಾವುದೇ ಬಗೆಯನ್ನು ಜೀವನಾಂಶಕ್ಕೂ ಬೇಡಿಕೆ ಇಟ್ಟಿಲ್ಲ ಎಂದು ಲಾಯರ್ ಅನಿತಾ ಹೇಳಿದ್ದಾರೆ. ಇಬ್ಬರು ಕೂಡ ತಮ್ಮ ಕೆರಿಯರ್ ನಲ್ಲಿ ಹೆಸರು, ಹಣ ಗಳಿಸಿದ್ದಾರೆ. ಹಾಗಾಗಿ ಇನ್ನೊಬ್ಬರ ಹಣದ ಅವಶ್ಯಕತೆ ಇಬ್ಬರಿಗೂ ಇಲ್ಲ ಎಂದು ಹೇಳಿದ್ದಾರೆ.
ಒಂದು ವರ್ಷದ ಹಿಂದೆಯೇ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ವಿಚ್ಛೇದನ ಪಡೆಯಲು ನಿರ್ಧರಿಸಿದ್ರು. ಮನೆಯವರ ಸಂಧಾನಕ್ಕೂ ಅವರಿಬ್ಬರು ಒಪ್ಪಿರಲಿಲ್ಲ. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಅನ್ನೋದು ಸುಳ್ಳು ಎಂದು ಅನಿತಾ ಹೇಳಿದ್ದಾರೆ. ನಿವೇದಿತಾ ಗೌಡ ಸೋಶಿಯಲ್ ಮೀಡಿಯಾ ಮೂಲಕ ತಮ್ಮ ವಿಚ್ಛೇದನವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಪೋಸ್ಟ್ ಶೇರ್ ಮಾಡಿದ ನಿವೇದಿತಗೌಡ ಕಮೆಂಟ್ ಬಾಕ್ಸ್ ಆಫ್ ಮಾಡಿದ್ದಾರೆ. ಗಾಯಕ ಚಂದನ್ ಶೆಟ್ಟಿ ಕೂಡ ಪೋಸ್ಟ್ ಮಾಡಿದೆ. ಈ ದಿನ ನಿವೇದಿತಾ ಗೌಡ ಹಾಗೂ ನಾನು, ನಮ್ಮ ದಾಂಪತ್ಯವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ ಎಂದು ಬರೆದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.