ರಾಜ್ಯದ ಎಲ್ಲಾ ಸಚಿವರಿಗೂ ಸಿಎಂ ಸಿದ್ದು ಕಾರು ಭಾಗ್ಯ, ಒಂದೊಂದು ಕಾರಿನ ಬೆಲೆ ಎಷ್ಟು ಗೊತ್ತಾ

ಎಲ್ಲ ಭಾಗ್ಯಗಳ ನಡುವೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ಈ ವೇಳೆ ಸಚಿವರಿಗೆ ಹೊಸ ಕಾರಿನ ಭಾಗ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಎಲ್ಲ 33 ಸಚಿವರಿಗೆ ಹೊಸ ಇನ್ನೋವಾ ಹೈಕ್ರಾಸ್ - ಹೈಬ್ರಿಡ್ ಕಾರುಗಳು ಶೀಘ್ರದಲ್ಲಿಯೇ ದೊರೆಯಲಿದ್ದು, ಇದಕ್ಕಾಗಿ ಸುಮಾರು 10 ಕೋಟಿ ರೂ. ಹಣವನ್ನು ಕೂಡ ಸರ್ಕಾರ ಬಿಡುಗಡೆ ಮಾಡಿದೆ.
ಸಂಪುಟದ ಎಲ್ಲ ಸಚಿವರಿಗೂ ತಲಾ 30 ಲಕ್ಷ ರೂ. ಬೆಲೆಯ ಹೊಸ ಇನ್ನೋವಾ ಹೈಕ್ರಾಸ್-ಹೈಬ್ರಿಡ್ ಕಾರುಗಳ ಖರೀದಿಗೆ ಸರ್ಕಾರ ಅನುಮತಿ ನೀಡಿದ್ದು, ಇದಕ್ಕೆ 4ಜಿ ವಿನಾಯಿತಿ ನೀಡಿ 9.90 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ವಿಚಾರವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ವಾರದ ಹಿಂದೆಯೇ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇನ್ನು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ, ಹೊಸ 33 ಸಚಿವರುಗಳಿಗೆ ಹೊಸ ಇನ್ನೋವಾ ಹೈಕ್ರಾಸ್-ಹೈಬ್ರಿಡ್ ಕಾರುಗಳನ್ನು ಪ್ರತಿ ವಾಹನಕ್ಕೆ ಜಿಎಸ್‌ಟಿ ಸೇರಿದಂತೆ ಎಕ್ಸ್‌ಶೋರೂಂ ಬೆಲೆ 30 ಲಕ್ಷ ರೂಪಾಯಿಯಂತೆ ಒಟ್ಟು 9.90 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಬಿಡದಿ ಬಳಿಯಿರುವ ಟೊಯೊಟೋ ಕಿರ್ಲೋಸ್ಕರ್ ಮೋಟಾರ್ ಪ್ರೈವೆಲ್ ಲಿಮಿಟೆಡ್ ಸಂಸ್ಥೆಯಿಂದ ನೇರವಾಗಿ ಕಾರುಗಳನ್ನು ಖರೀದಿಸಲಾಗುತ್ತದೆ ಎಂದು ಉಲ್ಲೇಖಿಸಲಾಗಿದೆ.
ಇನ್ನು ಸಚಿವರಿಗೆ ನೀಡಿರುವ ಇನ್ನೋವಾ ಹೈಕ್ರಾಸ್-ಹೈಬ್ರಿಡ್ ಕಾರು 2022ರ ಡಿಸೆಂಬರ್‌ನಲ್ಲಿ ಭಾರತದ ಮಾರುಕಟ್ಟೆಗೆ 8 ವಿವಿಧ ಮಾದರಿಯಲ್ಲಿ ಬಿಡುಗಡೆಯಾಗಿದೆ. ಈ ಕಾರಿನ ಬೆಲೆ 18.30 ಲಕ್ಷ ರೂ.ನಿಂದ ಆರಂಭವಾಗುತ್ತಿದ್ದು, ಟಾಪ್ ಮಾಡೆಲ್ ಕಾರಿಗೆ 30.26 ಲಕ್ಷ ರೂ. ದರ ಇದೆ. ಇದು ಎಕ್ಸ್ ಶೋ ರೂಮ್ ಬೆಲೆಯಾಗಿದ್ದು, ಜಿಎಸ್‌ಟಿ ಹಾಗೂ ರಸ್ತೆ ತೆರಿಗೆ ಸೇರಿದರೆ ಮತ್ತಷ್ಟು ಜಾಸ್ತಿಯಾಗಲಿದೆ.
ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.