ಕಾಮಿಡಿ ಕಿಲಾಡಿ ರಾಕೇಶ್ ಪೂಜಾರಿ ಸಾ#ವಿಗೆ ಸಿಕ್ತು ಸೂಕ್ತ ಕಾರಣ, ರಿಷಭ್ ಶೆಟ್ಟಿ ಶಾ ಕ್
May 12, 2025, 12:52 IST
|

ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ರಾಕೇಶ್ ಪೂಜಾರಿ ವಿಧಿವಶರಾಗಿದ್ದಾರೆ. ಅವರು ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು ಎಂದು ವೈದ್ಯರು ಘೋಷಿಸಿದರು ಎಂದು ತಿಳಿದು ಬಂದಿದೆ.
ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿಜೇತರಾಗಿ ಗಮನ ಸೆಳೆದ ರಾಕೇಶ್, ಹಾಸ್ಯಪ್ರಿಯ ವ್ಯಕ್ತಿತ್ವದಿಂದ ಅಭಿಮಾನಿಗಳ ಮನ ಗೆದ್ದಿದ್ದರು. ಕಿರುತೆರೆಯ ಜೊತೆ ಜೊತೆಗೆ ಚಿತ್ರರಂಗದಲ್ಲೂ ಅವರು ನಟನ ಚಾತುರ್ಯ ಮೆರೆದಿದ್ದರು. ಸದ್ಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನು ರಾಕೇಶ್ ಅವರ ಅಗಲಿಕೆ ಕನ್ನಡ ರಂಗಭೂಮಿ ಮತ್ತು ಕಿರುತೆರೆಗೆ ಭಾರಿ ನಷ್ಟವಾಗಿದೆ. ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಈ ದುಃಖದ ಸುದ್ದಿ ಕೇಳಿ ಶೋಕದಲ್ಲಿ ಮುಳುಗಿದ್ದಾರೆ.
ರಾಕೇಶ್ ಪೂಜಾರಿ ಅವರ ನಿಧನದಿಂದ ಎಲ್ಲರಿಗೂ ಶಾಕ್ ಆಗಿದ್ದು, ಅದೇ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದ ನಟಿ ರಕ್ಷಿತಾ ಪ್ರೇಮ್ ಅವರು ಕೂಡ 'ಮಿಸ್ ಯೂ ಮಗನೇ.. ನಾನು ಇನ್ಯಾವತ್ತೂ ನಿನ್ನ ಜೊತೆ ಮಾತನಾಡಲು ಆಗಲ್ಲ, ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ. ನೀನು ಅದರಲ್ಲಿ ಒಂದು ಶಕ್ತಿ ಆಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿ ನಮ್ಮ ಹೃದಯಲ್ಲಿ ನೆಲೆಸಿರುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಕೇಶ್ ಮಂಗಳೂರಿನ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ 'ಕಡ್ಲೆ ಬಜಿಲ್' ತುಳು ಕಾರ್ಯಕ್ರಮದಲ್ಲಿ ನಟಿಸಿದ್ದರು. ಅವರು ಪೈಲ್ವಾನ್, ಇದು ಎಂತ ಲೋಕವಯ್ಯ ಕನ್ನಡದಲ್ಲಿ ಮತ್ತು ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೊಕ್ಕೆಲ್ ತುಳುವಿನಲ್ಲಿ ನಾಟಕಗಳು, ಸ್ಕಿಟ್‌ಗಳು ಮತ್ತು ಚಲನಚಿತ್ರಗಳಲ್ಲಿಯೂ ನಟಿಸಿದ್ದಾರೆ. ಅವರು ಬಲೆ ತೆಲಿಪಾಲೆ, ಮೇ 22, ಸ್ಟಾರ್, ತೂಯಿನಾಯೆ ಪೋಯೆ ಮುಂತಾದ ಕರಾವಳಿ ರಿಯಾಲಿಟಿ ಶೋಗಳಲ್ಲಿ ಪ್ರದರ್ಶನ ನೀಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.