ಸೊಂಟ ನೋವು ಇದ್ದರೂ ಕೂಡ ಕುದುರೆಗಳಿಗೆ ಆಹಾರ ತಯಾರಿಸಿ ಸಂಕ್ರಾಂತಿ ಆಚರಿಸಿದ ದರ್ಶನ್
Jan 18, 2025, 08:36 IST
|

ನಟ ದರ್ಶನ್ ಅವರು ಕಳೆದ ಹಲವು ತಿಂಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಏನನ್ನೂ ಪೋಸ್ಟ್ ಮಾಡಿರಲಿಲ್ಲ. ಸಂಕ್ರಾಂತಿ ಪ್ರಯುಕ್ತ ಅವರು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ, ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ದರ್ಶನ್ ಅವರ ಈ ಪೋಸ್ಟ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿರುವ ದರ್ಶನ್ ಅವರು ಫಾರ್ಮ್ ಹೌಸ್ನಲ್ಲಿ ಸಂಕ್ರಾಂತಿ ಆಚರಿಸಿದ್ದಾರೆ. ಪತ್ನಿ ಮತ್ತು ಮಗನ ಜೊತೆ ಅವರು ಕಾಲ ಕಳೆದಿದ್ದಾರೆ. ಫಾರ್ಮ್ ಹೌಸ್ನಲ್ಲಿ ಇರುವ ಪ್ರಾಣಿಗಳ ಜೊತೆಗೆ ಹಬ್ಬ ಆಚರಿಸಿದ್ದಾರೆ. ಕುದುರೆಯ ಜೊತೆಗಿರುವ ಫೋಟೋವನ್ನು ದರ್ಶನ್ ಹಂಚಿಕೊಂಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಯಾಕೆಂದರೆ, ದರ್ಶನ್ ಅವರು ಪೋಸ್ಟ್ ಮಾಡಿರುವುದು ಬರೋಬ್ಬರಿ 7 ತಿಂಗಳ ಬಳಿಕ!
‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ.
ಕಳೆದ ವರ್ಷ ದರ್ಶನ್ ಅವರ ಪಾಲಿಗೆ ತುಂಬ ಕಷ್ಟಕರ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರುವಂತಾಯಿತು. ಪರಪ್ಪನ ಅಗ್ರಹಾರ ಮತ್ತು ಬಳ್ಳಾರಿ ಜೈಲಿನಲ್ಲಿ ಅವರು ದಿನ ಕಳೆದಿದ್ದರು. ಆಗಲೇ ಅವರಿಗೆ ಬೆನ್ನು ನೋವು ಕೂಡ ಹೆಚ್ಚಾಗಿತ್ತು. ನಡೆಯಲು ಕೂಡ ದರ್ಶನ್ ಕಷ್ಟಪಡುತ್ತಿದ್ದರು. ಆದ್ದರಿಂದ ಮಧ್ಯಂತರ ಜಾಮೀನು ಸಿಕ್ಕಿತ್ತು. ಆನಂತರ ರೆಗ್ಯುಲರ್ ಬೇಲ್ ಸಿಕ್ಕ ಬಳಿಕ ದರ್ಶನ್ ನಿಟ್ಟುಸಿರು ಬಿಟ್ಟರು.
ಕಹಿ ಘಟನೆಯಿಂದಾಗಿ ದರ್ಶನ್ ಅವರ ಜೀವನದಲ್ಲಿ ಏರುಪೇರು ಉಂಟಾಯಿತು. ಕೊಲೆ ಆರೋಪ ಎದುರಾಗಿದ್ದರಿಂದ ಸಿನಿಮಾ ಕೆಲಸಗಳನ್ನು ಬಿಟ್ಟು ಪೊಲೀಸ್ ಸ್ಟೇಷನ್, ಕೋರ್ಟು, ಜೈಲು, ಆಸ್ಪತ್ರೆ ಸುತ್ತುವಂತಾಯಿತು. ಆದರೆ 2025ರ ವರ್ಷದಲ್ಲಿ ಎಲ್ಲ ವಿಘ್ನಗಳು ನಿವಾರಣೆ ಆಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. ಅದರ ಮೊದಲ ಹಂತ ಎಂಬಂತೆ ದರ್ಶನ್ ಅವರು ಕುಟುಂಬದ ಜೊತೆ ಸೇರಿಕೊಂಡು ಸಂಕ್ರಾಂತಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ.
ಮೈಸೂರಿನ ತನ್ನ ಫಾರ್ಮ್ ಹೌಸ್ ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ ಇದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಅವರಿಗೆ ಕಾನೂನು ನೆರವು ಒದಗಿಸುವಲ್ಲಿ ಇವರಿಬ್ಬರ ಪಾತ್ರ ಮಹತ್ವದಾಗಿತ್ತು
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.