ನೇಹಾ ಕೊ.ಲೆಗಡುಕನ ಮುಖಕ್ಕೆ ಉಗಿದಂತೆ ಮಾತನಾಡಿದ ದರ್ಶನ್

 | 
Uu

ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹಿರೇಮಠ್‌ಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಈಗಾಗಲೇ ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ. ಆರೋಪಿ ಫಯಾಜ್‌ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ, ಪ್ರತಿಭಟನೆ ಭುಗಿಲೆದ್ದಿದೆ.

ಮಗಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ #JusticeForNeha ಟ್ರೆಂಡಿಂಗ್ ಆಗುತ್ತಿದೆ. ಇದೇ ಪ್ರಕರಣದ ಸಂಬಂಧ ಕನ್ನಡ ನಟ ದರ್ಶನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಈಗಾಗಲೇ ರಚಿತಾ ರಾಮ್, ಧ್ರುವ ಸರ್ಜಾ ಮೊದಲಾದ ತಾರೆಯರು ಈ ಕುರಿತಾಗಿ ಹೇಳಿಕೆ ನೀಡಿದ್ದಾರೆ.

ಸಹೋದರಿ ನೇಹಾ ಹಿರೇಮಠ್‌ರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ನಲ್ಲಿ ಹತ್ಯೆ ಆಗಿರುವುದು ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾದಂತಗಬೇಕುಎಂದು ಎಕ್ಸ್‌ನಲ್ಲಿ ಕನ್ನಡ ನಟ ಧ್ರುವ ಸರ್ಜಾ ಕೂಡ ಬರೆದುಕೊಂಡಿದ್ದರು.

ಪ್ರೀತಿ ಹೆಸರಿನಲ್ಲಿ ಅಮಾನುಷ ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ನಟ ದರ್ಶನ್ ಸೋಷಿಯಲ್ ಮೀಡಿಯಾದ ಮೂಲಕ ಆಗ್ರಹಿಸಿದ್ದಾರೆ. ಇನ್ನೂ ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಇನ್ಸ್ಟಾಗ್ರಾಮ್‌ನಲ್ಲಿ ದರ್ಶನ್‌ ಬರೆದುಕೊಂಡಿದ್ದಾರೆ.  (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.