ಬಾಕ್ಸ್ ಆಫೀಸ್ ಸುಲ್ತಾನ್ ಆಗಲು ಮುಂದಾದ ದರ್ಶನ್, ಡೆವಿಲ್‌ ಚಿತ್ರೀಕರಣದಲ್ಲಿ ದಾಸನ ಖಡಕ್ ಲುಕ್

 | 
Nxx
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿ ಜಾಮೀನು ಮೇಲೆ ಹೊರಬಂದು 9 ತಿಂಗಳ ಬಳಿಕ ನಟ ದರ್ಶನ್ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಜೈಲಿಗೆ ಹೋಗಿದ್ದರಿಂದ ಅರ್ಧಕ್ಕೆ ನಿಂತು ಹೋಗಿದ್ದ ‘ಡೆವಿಲ್’ ಚಿತ್ರದ ಚಿತ್ರೀಕರಣ ಇಂದು ಮೈಸೂರಿನಲ್ಲಿ ಮತ್ತೆ ಆರಂಭವಾಗಿದೆ. ಇಂದು ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಮೊದಲು ನಟ ದರ್ಶನ್ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.
ಡೆವಿಲ್ ಚಿತ್ರೀಕರಣದಲ್ಲಿ ಇಂದು ಭಾಗಿಯಾಗುತ್ತಿರುವ ದರ್ಶನ್ ಶೂಟಿಂಗ್‌ಗೂ ಮುನ್ನ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಚಾಮುಂಡಿ ಬೆಟ್ಟದಿಂದ ನೇರವಾಗಿ ಸರ್ಕಾರಿ ಅತಿಥಿ ಗೃಹಕ್ಕೆ ಆಗಮಿಸಿದ್ದಾರೆ. ಇಲ್ಲಿ 15ರವರೆಗೆ ಶೂಟಿಂಗ್ ನಡೆಸಲು ಅನುಮತಿ ಸಿಕ್ಕಿದೆ.
ಇನ್ನು ಮಿಲನಾ ಪ್ರಕಾಶ್ ನಿರ್ದೇಶನದಲ್ಲಿ ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಚಿತ್ರೀಕರಣ ಪುನರಾರಂಭವಾಗಿದೆ. ದರ್ಶನ್ ಕೂಡ ಚಿತ್ರೀಕರಣದಲ್ಲಿ ಭಾಗಿ ಆಗುತ್ತಿದ್ದಾರೆ. ಸದ್ಯಕ್ಕೆ ಮಾತಿನ ಭಾಗದ ಸನ್ನಿವೇಶಗಳ ಚಿತ್ರೀಕರಣ ನಡೀತಿದೆ. ಈಗಾಗಲೇ ಚಿತ್ರಕ್ಕೆ ನಾಯಕಿಯಾಗಿ ರಚನಾ ರೈ ಆಯ್ಕೆ ಆಗಿದ್ದಾರೆ. ಇದೀಗ ಮತ್ತೊಬ್ಬ ನಟಿ ತಂಡ ಸೇರಿದ್ದಾರೆ.
Fact check: ಇನ್ನು ಡೆವಿಲ್ ಸಿನಿಮಾ ಶೂಟಿಂಗ್ ಆರಂಭವಾಗುತ್ತಿದ್ದಂತೆ ದರ್ಶನ್ ಸುಸ್ತಾಗಿದ್ದಾರೆ. ಅವರನ್ನು ನೋಡೋಕೆ ಅವರ ಪತ್ನಿ ವಿಜಯಲಕ್ಷ್ಮಿ ಓಡೋಡಿ ಬಂದಿದ್ದಾರೆ ಎಂದೆಲ್ಲ ಹೇಳಲಾಗ್ತಿದೆ. ಆದರೆ ಆ ಕುರಿತಾಗಿ ಚಿತ್ರತಂಡ ಎಲ್ಲಿಯೂ ಮಾಹಿತಿ ನೀಡಿಲ್ಲ .ಮೈಸೂರಿನ ಲಲಿತ್ ಮಹಲ್‌ನಲ್ಲಿ ಚಿತ್ರೀಕರಣ ನಡೀತಿದೆ. ಸೆಟ್‌ನಲ್ಲಿ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಹುಕೋಟಿ ವೆಚ್ಚದಲ್ಲಿ 'ಡೆವಿಲ್' ಸಿನಿಮಾ ನಿರ್ಮಾಣವಾಗುತ್ತಿದೆ. ನಿರ್ದೇಶನದ ಜೊತೆಗೆ ಮಿಲನಾ ಪ್ರಕಾಶ್ ಚಿತ್ರಕ್ಕೆ ಹಣ ಹೂಡುತ್ತಿದ್ದಾರೆ. ಮಹೇಶ್ ಮಂಜ್ರೇಕರ್, ಜಿಶು ಸೆಂಗುಪ್ತ, ಮುಖೇಶ್ ರಿಷಿ, ಫರ್ದೀನ್ ಖಾನ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಜನಿಶ್ ಲೋಕನಾಥ್ ಸಂಗೀತ, ಸುಧಾಕರ್ ರಾಜ್ ಛಾಯಾಗ್ರಹಣ ಚಿತ್ರಕ್ಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.