ದರ್ಶನ್ ಮನೆ ಕೂಡ ವಕ್ಫ್ ಆಸ್ತಿ; ದಾಸನಿಗೆ ಮತ್ತೊಂದು ತಲೆನೋವು
Nov 16, 2024, 11:23 IST
|
ಮಧ್ಯಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬೆನ್ನು ನೋವಿಗೆ ಸರ್ಜರಿ ಮಾಡಿಸಿಕೊಳ್ಳಲು ದರ್ಶನ್ ಜಾಮೀನು ಪಡೆದುಕೊಂಡಿದ್ದರು. ಆದರೆ ಜೈಲಿನಿಂದ ಹೊರ ಬಂದು ಇಷ್ಟು ದಿನಗಳಾದರೂ ಸರ್ಜರಿಗೆ ದಿನಾಂಕ ನಿಗದಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿ ದರ್ಶನ್ ಜಾಮೀನು ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರುವುದು ಫಿಕ್ಸ್ ಆಗಿದೆ.
ದರ್ಶನ್ ಅವರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರದ ಅನುಮತಿ ಬೇಕಿತ್ತು. ಕಳೆದ ನವೆಂಬರ್ 13ರಂದು ಗೃಹ ಸಚಿವಾಲಯದಿಂದ ಗ್ರೀನ್ ಸಿಗ್ನಲ್ ಸಹ ಸಿಕ್ಕಿದೆ. ಸರ್ಕಾರದ ಅನುಮತಿ ಬೆನ್ನಲ್ಲೇ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಈಗಾಗಲೇ ಮೇಲ್ಮನವಿ ಅರ್ಜಿ ಸಿದ್ದಪಡಿಸಿದ್ದಾರೆ.
ನಟ ದರ್ಶನ್ ಮಧ್ಯಂತರ ಮಧ್ಯಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬೆನ್ನು ನೋವಿಗೆ ಸರ್ಜರಿ ಮಾಡಿಸಿಕೊಳ್ಳಲು ದರ್ಶನ್ ಜಾಮೀನು ಪಡೆದುಕೊಂಡಿದ್ದರು. ಆದರೆ ಜೈಲಿನಿಂದ ಹೊರ ಬಂದು ಇಷ್ಟು ದಿನಗಳಾದರೂ ಸರ್ಜರಿಗೆ ದಿನಾಂಕ ನಿಗದಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿ ದರ್ಶನ್ ಜಾಮೀನು ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರುವುದು ಫಿಕ್ಸ್ ಆಗಿದೆ.
ದರ್ಶನ್ ಅವರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರದ ಅನುಮತಿ ಬೇಕಿತ್ತು. ಕಳೆದ ನವೆಂಬರ್ 13ರಂದು ಗೃಹ ಸಚಿವಾಲಯದಿಂದ ಗ್ರೀನ್ ಸಿಗ್ನಲ್ ಸಹ ಸಿಕ್ಕಿದೆ. ಸರ್ಕಾರದ ಅನುಮತಿ ಬೆನ್ನಲ್ಲೇ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಈಗಾಗಲೇ ಮೇಲ್ಮನವಿ ಅರ್ಜಿ ಸಿದ್ದಪಡಿಸಿದ್ದಾರೆ.
ನಟ ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಇನ್ನೆರಡು ದಿನಗಳಲ್ಲಿ SLP ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್‌ಪಿಪಿ ಪ್ರಸನ್ನ ಕುಮಾರ್ ಅವರಿಗೆ ಮೇಲ್ಮನವಿ ಅರ್ಜಿಯನ್ನು ತಯಾರು ಮಾಡಿಕೊಡುವ ಜವಾಬ್ದಾರಿಯನ್ನು ನೀಡಲಾಗಿದೆ. ಪ್ರಸನ್ನ ಕುಮಾರ್ ಅವರು ಅರ್ಜಿ ಸಿದ್ದಪಡಿಸಿ ಈಗಾಗಲೇ ಪೊಲೀಸ್ ಇಲಾಖೆಗೆ ನೀಡಿದ್ದಾರೆ. ಕೆಲ ದಾಖಲಾತಿಗಳ ಭಾಷಾಂತರ ಕೆಲಸ ಮುಗಿದ ಬಳಿಕ ಅಂದ್ರೆ ಮುಂದಿನ ಸೋಮವಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಆರೋಪಿ ದರ್ಶನ್ ಅವರು ವೈದ್ಯಕೀಯ ಚಿಕಿತ್ಸೆ ಕಾರಣಕ್ಕೆ ಬೇಲ್ ಪಡೆದಿದ್ದಾರೆ. ಆಪರೇಷನ್ ಅಂತಾ ಬೇಲ್ ಪಡೆದು ಆಪರೇಷನ್ ಮಾಡಿಸಿಕೊಂಡಿಲ್ಲ. ಬಿಜಿಎಸ್ ಆಸ್ಪತ್ರೆಯಲ್ಲಿ ಸಾಂಪ್ರದಾಯಿಕ ರೀತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ರೀತಿ ಬೇಲ್ ಪಡೆದ್ರೆ ಮುಂದೆ ಎಲ್ಲಾ ಕೈದಿಗಳಿಗೂ ಇದೇ ಉದಾಹರಣೆ ಆಗುತ್ತದೆ. ಹೀಗಾಗಿ ಮಧ್ಯಂತರ ಜಾಮೀನು ರದ್ದು ಮಾಡಲು ಮನವಿ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ದರ್ಶನ್ ಮನೆ ಹಾಗೂ ಆಸ್ತಿ ವಕ್ಫ್ ಆಸ್ತಿ ಎಂದು ಕೂಡ ಹೇಳಲಾಗ್ತಿದೆ ಮುಂದಿನ ದಿನಗಳಲ್ಲಿ ಏನಾಗುತ್ತದೆ ಕಾದು ನೋಡಬೇಕಿದೆ.