ದರ್ಶನ್ ಅಳಿಯ ಚಂದನ್ ಮಾಡಿದ ಸಣ್ಣ ತಪ್ಪಿಗೆ ಡೆವಿಲ್ ಸಿನಿಮಾದಿಂದ ಒದ್ದು ಹೊರಹಾಕಿದ ಡಿ ಬಾಸ್
Mar 14, 2025, 07:30 IST
|

ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ದರ್ಶನ್ ಅವರು ಒಂದು ಮುಖ್ಯವಾದ ಸಂದೇಶ ನೀಡಿದ್ದಾರೆ. ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದು ದರ್ಶನ್ ಪೋಸ್ಟ್ ಮಾಡಿದ್ದಾರೆ.
ಹಾಗಾಗಿ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ. ಚಂದು ಅಥವಾ ನನ್ನ ಮಗ ವಿನೀಶ್ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ. ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟ ಆಗುವುದಿಲ್ಲ ಎಂದು ದರ್ಶನ್ ಅವರು ಖಡಕ್ ಸಂದೇಶ ನೀಡಿದ್ದಾರೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಜಾಮೀನು ಪಡೆದಿದ್ದಾರೆ. ಈಗ ಡೆವಿಲ್ ಸಿನಿಮಾ ಶೂಟಿಂಗ್ ಶುರು ಮಾಡಲು ಮುಂದಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗುವ ಮುನ್ನ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ದರ್ಶನ್ ತೊಡಗಿಕೊಂಡಿದ್ದರು. ಸುಮಾರು 9 ತಿಂಗಳ ಬಳಿಕ ಪುನಃ ಶೂಟಿಂಗ್ ಪ್ರಾರಂಭಿಸಲಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,14 Mar 2025
ಲಂಡನ್ ನಲ್ಲಿ ಗೆಳೆಯನ ಜೊತೆ ಕಾಲಕಳೆಯುತ್ತಿರುವ ಅನುಶ್ರೀ
Fri,14 Mar 2025
ಮಗು ನಾಮಕರಣಕ್ಕೆ ದರ್ಶನ್ ಬರಲ್ಲ, ಬಿರುಗಾಳಿ ಎಬ್ಬಿಸಿದ ಸುಮಲತಾ
Fri,14 Mar 2025