ರೇಣುಕಾಸ್ವಾಮಿ ತಲೆ ಬಿಸಿಯಲ್ಲೂ ಮಾಲ್ಡೀವ್ಸ್ ನಲ್ಲಿ ಎಂಜಾಯ್ ಮಾಡುತ್ತಿರುವ ದಶ೯ನ್ ಪತ್ನಿ ವಿಜಯಲಕ್ಷ್ಮಿ ವಿಡಿಯೋ
| Aug 11, 2025, 00:17 IST
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್ ಆಗಿದ್ದಾರೆ. ಆಗಾಗ ದರ್ಶನ್ ಹಾಗೂ ಮಗ ವಿನೀಶ್ ಜೊತೆಗೆ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಅಷ್ಟೇ ಅಲ್ಲದೇ ವಿಜಯಲಕ್ಷ್ಮಿ ಅವರ ಮುದ್ದಿನ ನಾಯಿ ಮರಿ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.
ಆದ್ರೆ, ಇದೀಗ ವಿಜಯಲಕ್ಷ್ಮಿ ಅವರು ಮಾಲ್ಡೀವ್ಸ್ನ ಕಡಲ ತೀರದಲ್ಲಿ ನಿಂತುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇದೇ ಫೋಟೋ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇನ್ನೂ, ವಿಜಯಲಕ್ಷ್ಮಿ ಎರಡು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅದರ ಜೊತೆಗೆ ಸೂರ್ಯ, ಸಮುದ್ರ ಹಾಗೂ ನಾನು ಅಂತ ಇಂಗ್ಲಿಷ್ನಲ್ಲಿ ಬರೆದುಕೊಂಡಿದ್ದಾರೆ. ಶೇರ್ ಮಾಡಿಕೊಂಡ ಫೋಟೋದಲ್ಲಿ ವಿಜಯಲಕ್ಷ್ಮಿ ತಿಳಿ ನೀಲಿ ಬಣ್ಣದ ಶರ್ಟ್ ಹಾಗೂ ಬ್ಲ್ಯಾಕ್ ಲೂಸ್ ಪ್ಯಾಂಟ್ ಹಾಕಿಕೊಂಡಿದ್ದಾರೆ.