ಸಾ ವು ಬದುಕಿನ ನಡುವೆ ಒತ್ತಾಡುತ್ತಿರುವ ಖ್ಯಾತ ನಟ; ಶೂಟಿಂಗ್ ನಲ್ಲಿ ಎಡವಟ್ಟು

 | 
U
ಕಳೆದ ಎರಡು ವರ್ಷಗಳಿಂದ ತಮಿಳು ಸ್ಟಾರ್‌ ನಟ ಸೂರ್ಯ ಅಭಿಯನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ, ಹೀಗಾಗಿ ಅವರ ಮುಂದಿನ ಸಿನಿಮಾ ರಿಲೀಸ್‌ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸಿರುತೈ ಶಿವ ನಿರ್ದೇಶನದ 'ಕಂಗುವ' ಚಿತ್ರವು ಸ್ಟುಡಿಯೋ ಗ್ರೀನ್ ಮತ್ತು ಯುವಿ ಕ್ರಿಯೇಷನ್ಸ್‌ನ ಸಹಯೋಗದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. 
ಬಿಗ್‌ ಬಜೆಟ್‌ನಲ್ಲಿ ತಯಾರಾಗಿರುವ ಈ ಚಿತ್ರ ಅಕ್ಟೋಬರ್ 10 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಗಂಗುವಾ ಚಿತ್ರದ ನಂತರ ನಟ ಸೂರ್ಯ ಅವರು ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ 'ಸೂರ್ಯ 44' ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಆರಂಭಿಕ ಚಿತ್ರೀಕರಣ ಮಾಲ್ಡೀವ್ಸ್‌ನಲ್ಲಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಟೀಸರ್ ವಿಡಿಯೋಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 
ಸೂರ್ಯ ಸ್ಟೈಲಿಶ್ ಗ್ಯಾಂಗ್‌ಸ್ಟರ್ ಲುಕ್‌ ಅವರ ಅಭಿಮಾನಿಗಳಿಗೆ ತುಂಬಾ ಇಷ್ಟವಾಗಿದೆ. ಮಾಲ್ಡೀವ್ಸ್‌ನಲ್ಲಿ ಚಿತ್ರೀಕರಣ ಮುಗಿಸಿ ಇದೀಗ ಊಟಿಯಲ್ಲಿ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಿದೆ.. ಇದೇ ವೇಳೆ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ನಡೆದ ಹಠಾತ್‌ ಅಪಘಾತದಲ್ಲಿ ನಟ ಸೂರ್ಯ ತಲೆಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ತಕ್ಷಣ ಶೂಟಿಂಗ್ ನಿಲ್ಲಿಸಿ ನಟನನ್ನು ಆಸ್ಪತ್ರೆಗೆ ಕರೆದೊಯ್ದಲಾಗಿದೆ. ಅವರಿಗೆ ಚಿಕಿತ್ಸೆ ನೀಡಿ ಪರೀಕ್ಷಿಸಿದ ವೈದ್ಯರು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಈ ಸುದ್ದಿ ಸೂರ್ಯ ಅಭಿಮಾನಿಗಳಲ್ಲಿ ದೊಡ್ಡ ಆಘಾತ ಉಂಟುಮಾಡಿದೆ. ಅಲ್ಲದೆ, ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.