ದುಬಾರಿ ಸೀಮಂತ ಮಾಡಿಸಿಕೊಂಡ ದೀಪಿಕಾ ಪಡುಕೋಣೆ; ಪಕ್ಕದಲ್ಲಿ ಗಂಡ ಕಾಣಲಿಲ್ಲ
ಪಠಾಣ್, ಜವಾನ್ ಬೆಡಗಿ ದೀಪಿಕಾ ಪಡುಕೋಣೆ ಅಮ್ಮನಾಗಲು ಇನ್ನೆರಡೇ ತಿಂಗಳು ಬಾಕಿ ಇದೆ. ಬರುವ ಸೆಪ್ಟೆಂಬರ್ನಲ್ಲಿ ಮಗುವನ್ನು ಬರಮಾಡಿಕೊಳ್ಳಲಿದ್ದಾರೆ. ಇವರಿಗೆ ಗಂಡು ಮಗು ಆಗಲಿದೆ ಎಂದು ಜ್ಯೋತಿಷಿಗಳು ಇದಾಗಲೇ ಹೇಳಿಯಾಗಿದೆ. ಗರ್ಭಿಣಿಯಾಗಿರುವ ವಿಷಯ ತಿಳಿದ ಬಳಿಕವೂ ತಾವು ನಟಿಸುತ್ತಿದ್ದ ಎಲ್ಲಾ ಚಿತ್ರಗಳ ಶೂಟಿಂಗ್ಗಳನ್ನೂ ಮುಗಿಸಿ ಭೇಷ್ ಅನ್ನಿಸಿಕೊಂಡಿದ್ದಾರೆ ನಟಿ.
ಎಂಟನೆಯ ತಿಂಗಳಿನಲ್ಲಿ ಹೊಸ್ತಿಲಿನಲ್ಲಿರುವ ದೀಪಿಕಾ ಅವರಿಗೆ ಸಂಪ್ರದಾಯಬದ್ಧವಾಗಿ ಸೀಮಂತ ಮಾಡಲಾಗಿದೆ. ಇದರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಧಾರ್ಮಿಕ ಗ್ರಂಥಗಳ ಪ್ರಕಾರ, ಸೀಮಂತ ಶಾಸ್ತ್ರಕ್ಕೆ ಅದರದ್ದೇ ಆದ ಮಹತ್ವವಿದೆ. ಇದನ್ನು ಮಾಡುವುದರಿಂದ ಹುಟ್ಟುವ ಮಗು ಶಕ್ತಿ ಪಡೆಯುತ್ತದೆ. ಈ ಸಮಯದಲ್ಲಿ, ಗರ್ಭದಲ್ಲಿ ಬೆಳೆಯುತ್ತಿರುವ ಮಗುವನ್ನು ಅನೇಕ ಮಂತ್ರಗಳಿಂದ ಸಂಸ್ಕಾರ ಮಾಡಲಾಗುತ್ತದೆ.
ಹೀಗೆ ಮಾಡುವುದರಿಂದ ಆ ಮಗುವು ಗ್ರಹ ಹೊಂದಾಣಿಕೆಯನ್ನು ಪಡೆಯುತ್ತದೆ ಮತ್ತು ಯಾವುದಾದರೂ ಅಶುಭ ಯೋಗವುಂಟಾದರೆ ಅದರ ಪರಿಣಾಮವೂ ದೂರಾಗುತ್ತದೆ ಎನ್ನಲಾಗುತ್ತದೆ. ಅಂದಹಾಗೆ, ದೀಪಿಕಾ ಇತ್ತೀಚೆಗಷ್ಟೇ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಸಂಭ್ರಮದಲ್ಲಿ ಗರ್ಭಿಣಿ ಕಾಣಿಸಿಕೊಂಡಿದ್ದರು. ಝಗಮಗ ಡ್ರೆಸ್ ಹಾಕಿಕೊಂಡಿದ್ದ ನಟಿಯ ಹೊಟ್ಟೆ ಒಂದು ದೊಡ್ಡದಾಗಿರುವುದು ಬಿಟ್ಟರೆ, ಅದೇ ಫಿಗರ್ ಮೆಂಟೇನ್ ಮಾಡಿರುವುದಕ್ಕೆ ಶ್ಲಾಘನೆಗಳ ಮಹಾಪೂರವೇ ಹರಿದು ಬಂದಿತ್ತು.
ಸಾಮಾನ್ಯವಾಗಿ ಗರ್ಭಧರಿಸಿದ ಮೇಲೆ ಹೆಣ್ಣುಮಕ್ಕಳು ತೂಕ ಹೆಚ್ಚಿಸಿಕೊಳ್ಳುವುದು ಮಾಮೂಲು. ಆದರೆ ದೀಪಿಕಾ ಹೊಟ್ಟೆ ಮಾತ್ರ ಬಂದಿರುವುದು ಬಿಟ್ಟರೆ, ಮೊದಲಿನ ರೀತಿಯಲ್ಲಿಯೇ ಕಾಣಿಸಿಕೊಂಡಿದ್ದರು. ಇದರ ಸೀಕ್ರೇಟ್ ಏನು ಎಂದು ಫ್ಯಾನ್ಸ್ ಪ್ರಶ್ನಿಸಿದ್ದರು. ಇದೇ ವೇಳೆ, ದೀಪಿಕಾ ಚಿತ್ರರಂಗದಿಂದ ದೂರ ಆಗ್ತಾರಾ ಎನ್ನುವ ಪ್ರಶ್ನೆ ಕೂಡ ಅಭಿಮಾನಿಗಳ ತಲೆ ಕೆಡಿಸಿದೆ. ಇದಕ್ಕೆ ಕಾರಣವೂ ಇದೆ. ರಣವೀರ್ ಸಿಂಗ್ ಮತ್ತು ದೀಪಿಕಾ, 25 ಜುಲೈ 2019 ರಂದು ಇಟಲಿಯ ಲೇಕ್ ಕೊಮೊದಲ್ಲಿ ವಿವಾಹವಾಗಿದ್ದದಾರೆ.
ಮದುವೆಯಾಗಿ ಸುಮಾರು 5 ವರ್ಷಗಳಾದರೂ ಈ ಜೋಡಿ ಮಗುವಿನ ಬಗ್ಗೆ ಮಾತನಾಡಿರಲಿಲ್ಲ. ದೀಪಿಕಾ ಅವರ ಕೈಯಲ್ಲಿ ಭರ್ಜರಿ ಆಫರ್ ಇರುವ ಕಾರಣ, ಮಗುವಿನ ಬಗ್ಗೆ ಯೋಚನೆ ಮಾಡಿರಲಿಲ್ಲ. ಅವರು ತಮ್ಮ ಕರಿಯರ್ ಮೇಲೆ ಫೋಕಸ್ ಮಾಡಿದ್ದರು. ನಟಿ ದೀಪಿಕಾ ಅವರು ಪ್ರೆಗ್ನೆನ್ಸಿ ಮುಂದೂಡಿದರೂ ಕೂಡಾ ಕೆಲವೊಂದು ಪ್ರಮುಖ ಪ್ರಾಜೆಕ್ಟ್ ಮಾಡಿ ಸೈ ಎನಿಸಿಕೊಂಡರು.
ಪಠಾಣ್, ಜವಾನ್, ಫೈಟರ್ ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಮದುವೆಯಾದ ಮೇಲೆ ಚಿತ್ರರಂಗ ತೊರೆಯಲಿಲ್ಲ. ಆದರೆ ಮಗುವಾದ ಮೇಲೆ ಚಿತ್ರರಂಗ ತೊರೆಯುವುದಾಗಿ ಅವರು ಈ ಹಿಂದೆ ನೀಡಿದ್ದ ಹೇಳಿಕೆ ಈಗ ವೈರಲ್ ಆಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ