ತಿಮರೋಡಿ ವಿರುದ್ಧ ರೊಚ್ಚಿಗೆದ್ದ ದೀಪು ಶೆಟ್ಟಿಗಾರ್, ಸೌಜನ್ಯ ಹೆಸರಲ್ಲಿ ವೀರೇಂದ್ರ ಹೆಗ್ಗಡೆ ಕುಟುಂಬ ಟಾರ್ಗೆಟ್

 | 
Hd

ಧರ್ಮಸ್ಥಳ ದಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಕೊಡುವಂತೆ ಆಗ್ರಹಿಸಿ ಕರಾವಳಿ ಸೇರಿದಂತೆ ನಾಡಿನಾದ್ಯಂತ ಪ್ರತಿಭಟನೆಗಳು ದಿನೇ ದಿನೇ ತೀವ್ರಗೊಳ್ಳುತ್ತಿದೆ. ಮತ್ತೊಂದೆಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಪರ ಕೂಡ ಸಭೆಗಳು ಅಲ್ಲಲ್ಲಿ ನಡೆಯತ್ತಿದ್ದು ಕರಾವಳಿ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದಂತಿದ್ದು ಯಾವುದೇ ಕ್ಷಣದಲ್ಲಿ ಸ್ಪೋಟಗೊಂಡು ಘರ್ಷಣೆಗಳು ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. 

ಇನ್ನು ಈ ಕುರಿತಾಗಿ ಮಾತನಾಡಿರುವ ದೀಪು ಶೆಟ್ಟಿಗಾರ್ ಅವರು ಮಹೇಶ್ ಶೆಟ್ಟಿ ತಿಮಿರೋಡಿ ಅವರಿಗೆ ಕೇಳಿದ್ದಾರೆ. ಅಲ್ಲದೆ ತಾನು ಯಾರಿಂದಲೂ ಹಣ ಪಡೆದಿಲ್ಲ ಎಂಬುದಾಗಿ ನುಡಿದು ತಮ್ಮ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಧರ್ಮಸ್ಥಳದ ಬಳಿ ನಡೆದ ಕೆಲವು ಘಟನೆಗಳನ್ನು ನೆಪವಾಗಿ ಇಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ತನ್ನ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ಕಳೆದ ಒಂದು ವರ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ಆರೋಪ ಮಾಡುತ್ತಾ ಬಂದಿದ್ದಾರೆ. 

ಸರಕಾರ, ಕಾನೂನು,ಪೊಲೀಸ್ ಮೊದಲಾದ ರಾಜ್ಯದ ಉನ್ನತ ಮಟ್ಟದ ಇಲಾಖೆಗಳನ್ನು ದೂರುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಸುಳ್ಳು ಮಾಹಿತಿ ಹರಡುತ್ತಿದೆ.ಈ ಆರೋಪಗಳು ನನಗೆ ಹಾಗೂ ಪೊಲೀಸ್ ಇಲಾಖೆಗೆ ಮಾಡಿದ ಅವಮಾನವೆಂದು ನಾನು ತಿಳಿದಿದ್ದೇನೆ. ಆದ್ದರಿಂದ ಈ ವಿಚಾರದ ಬಗ್ಗೆ ಪೊಲೀಸ್ ಉನ್ನತಾಧಿಕಾರಿಗಳು ಕೂಲಂಕಶವಾಗಿ ಪರಿಶೀಲಿಸಿ ತನಿಖೆ ನಡೆಸಿ ಸತ್ಯಾ ಸತ್ಯತೆಯನ್ನು ನಮಗೆ ಹಾಗೂ ಸಾರ್ವಜನಿಕರಿಗೆ ತಿಳಿಯಪಡಿಸಬೇಕು. 

ಇಲಾಖೆ ಗಂಭೀರ ತನಿಖೆ ನಡೆಸಿದರೆ ಕಾನೂನು ಮತ್ತು ಸಂವಿಧಾನದ ಗೌರವವನ್ನು ಎತ್ತಿ ಹಿಡಿದಂತಾಗುತ್ತದೆ ಎಂದು ಹೇಳಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೆಸರನ್ನು ಕೆಡಿಸುವ ಯತ್ನ ನಡೆದಿದೆ. ಧರ್ಮಸ್ಥಳ ಕ್ಷೇತ್ರಕ್ಕೆ ದೇಶದ ಎಲ್ಲ ಭಾಗಗಳ ಎಲ್ಲ ಧರ್ಮದ ಭಕ್ತರು ಬರುತ್ತಾರೆ. ಜಾತಿ-ಧರ್ಮ ಮೀರಿದ ದೇಶದ ಪ್ರಮುಖ ಶ್ರದ್ಧಾ ಕೇಂದ್ರ ಧರ್ಮಸ್ಥಳ. 

ಆದರೆ ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಪ್ಪು ಚುಕ್ಕಿ ತರುವ ಕೆಲಸ ಯಾರೂ ಮಾಡಬಾರದು. ಕಾನೂನು ಪ್ರಕಾರ, ನಿಜವಾದ ಆರೋಪಿಗೆ ಶಿಕ್ಷೆ ಆಗಬೇಕೆಂದು ವೀರೇಂದ್ರ ಹೆಗ್ಗಡೆ ಕೂಡ ಹೇಳಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್‍ಗೆ ಹೋಗಿ ಆದರೂ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ದೀಪು ಶೆಟ್ಟಿಗಾರ್ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.