ಜೆಡಿಎಸ್ ಪಕ್ಷ ಹೀನಾಯ ಸೋಲು, ಜೆಡಿಎಸ್ ಪತನಕ್ಕೆ ಕಂಗಾಲಾಗಿ ಕಣ್ಣೀರಿಟ್ಟ ದೇವೆಗೌಡರು

 | 
ಹಹ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ನಿಚ್ಚಳವಾಗಿದೆ. ಕಾಂಗ್ರೆಸ್ ಪಕ್ಷ ಪೂರ್ಣಬಹುಮತದೊಂದಿಗೆ ಅಧಿಕಾರಕ್ಕೇರುವುದು ಖಚಿತವಾಗಿದೆ. ಫಲಿತಾಂಶಕ್ಕೂ ಮುನ್ನ ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಕಷ್ಟ ಎಂಬ ಅಭಿಪ್ರಾಯಗಳು ದೊಡ್ಡ ಮಟ್ಟದಲ್ಲಿ ವ್ಯಕ್ತವಾಗಿತ್ತು. ಹೆಚ್ಚಿನ ಸಮೀಕ್ಷೆಗಳು ಕೂಡ ಈ ಅಭಿಪ್ರಾಯವನ್ನೇ ವ್ಯಕ್ತಪಡಿಸಿದ್ದು ಹೀಗಾಗಿ ಜೆಡಿಎಸ್ ಮತ್ತೊಮ್ಮೆ ಕಿಂಗ್ ಮೇಕರ್ ಆಗುವ ಕನಸು ಕಂಡಿತ್ತು. ಆದರೆ ಚುನಾವಣಾ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿದೆ.

ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು. ಈ ಕುರಿತು ಟ್ವೀಟ್‌ ಮೂಲಕ ಹೇಳಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು ಎಂದರು. 

ಆದರೆ ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಎಚ್. ಡಿ ದೇವೆಗೌಡರು ಪಕ್ಷದ ಹೀನಾಯ ಸೋಲಿಗೆ ಕಣ್ಣೀರಿಟ್ಟಿದ್ದಾರೆ. ಒಂದಾನೊಂದು ಕಾಲದಲ್ಲಿ ಜೆಡಿಎಸ್ ತೆನೆ ಹೊತ್ತ ಮಹಿಳೆಯಂತೆ ಹಸಿರು ಹಸಿರಾಗಿತ್ತು.ಆದರೆ ಇದೀಗ ಯಾರ ದೃಷ್ಟಿ ಬಿತ್ತೋ ಏನೋ ಸೋಲಿನ ಸುಳಿಯಲ್ಲಿ ಸಿಲುಕಿದೆ ಅತಿಯಾದ ಆತ್ಮ ವಿಶ್ವಾಸ ನಮ್ಮನ್ನು ಈ ಸ್ಥಿತಿಗೆ ತಲುಪಿಸಿದೆ ಎಂದು ಬೇಸರಿಸಿದರು. ಇನ್ನು ಈ ಕುರಿತಾಗಿ ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. 

ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ.ಜನಾದೇಶವನ್ನು ಸ್ವಾಗತಿಸುವುದಾಗಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸಾಧ್ಯವಾದಷ್ಟು ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರವಹಿಸುವುದು ಲೆಕ್ಕಾಚಾರವಾಗಿತ್ತು. ಜೆಡಿಎಸ್ ನಾಯಕರು ಕೂಡ ಅದೇ ಆತ್ಮವಿಶ್ವಾಸದಲ್ಲಿದ್ದರು. 35ಕ್ಕಿಂತ ಹೆಚ್ಚಿನ ಸ್ಥಾನವನ್ನು ಗಳಿಸುವ ಆತ್ಮವಿಶ್ವಾಸವೂ ಜೆಡಿಎಸ್ ಪಕ್ಷದಲ್ಲಿತ್ತು. ಆದರೆ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದ್ದು ಜೆಡಿಎಸ್ 20ರ ಆಸುಪಾಸಿನಲ್ಲಿರುವುದು ಆಘಾತವುಂಟು ಮಾಡಿದೆ.

ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸಾಂಪ್ರದಾಯಿಕವಾಗಿ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿಯೂ ಭಾರೀ ಹಿನ್ನಡೆ ಕಂಡಿದೆ. ಹಾಸನ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಜೆಡಿಎಸ್ ಹಿಡಿತ ಕಳೆದುಕೊಂಡಿದೆ. ರಾಮನಗರದಲ್ಲಿ ಸ್ವತಃ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದಾರೆ. ಮಂಡ್ಯದಲ್ಲಿಯೂ ಜೆಡಿಎಸ್‌ಗೆ ದೊಡ್ಡ ಹಿನ್ನಡೆಯಾಗಿದೆ. ಹೀಗಾಗಿ ನಿರೀಕ್ಷಿತ ಮಟ್ಟಕ್ಕಿಂತಲೂ ಜೆಡಿಎಸ್ ದೊಡ್ಡ ಪ್ರಮಾಣದಲ್ಲಿ ಸೀಟುಗಳನ್ನು ಕಳೆದುಕೊಂಡಿದೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.