ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸರ್ಜಾ ಕಡೆಯಿಂದ ದೊಡ್ಡಮಟ್ಟದ ಪರಿಹಾರ; ಕನ್ನಡಿಗರು ಫಿದಾ

 | 
Yu

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಪೊಲೀಸರ ಅತಿಥಿಯಾಗಿದ್ದಾರೆ. ದರ್ಶನ್‌ ಹಾಗೂ ಪವಿತ್ರಗೌಡ ಸೇರಿದಂತೆ ಬರೋಬ್ಬರಿ 19 ಕ್ಕೂ ಹೆಚ್ಚು ಜನರನ್ನ ಪೊಲೀಸ್ರು ಬಂಧಿಸಿದ್ದಾರೆ.ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ ಕಾರಣಕ್ಕೆ ದರ್ಶನ್ ತಮ್ಮ ಆಪ್ತರ ಮೂಲಕ ಆತನನ್ನು ಅಪಹರಿಸಿ ಥಳಿಸಿ, ಹತ್ಯೆ ಪ್ರಕರಣದಿಂದಾಗಿ ನಟ ದರ್ಶನ್ ಆರೋಪಿಯಾಗಿ ಜೈಲು ಸೇರಿದ್ದಾರೆ. 

ಇನ್ನು, ರಾಜ್ಯದಲ್ಲಿ ದರ್ಶನ್‌ ಕುರಿತು ಸಾಕಷ್ಟು ಪರ ವಿರೋಧ ಚರ್ಚೆ ನಡೆಯುತ್ತಿದ್ದು, ಭಾವನಾ ಬೆಳಗೆರೆ ಸೇರಿದಂತೆ ಕೆಲವರು ಚಿತ್ರದುರ್ಗದ ರೇಣುಕಾಸ್ವಾಮಿ ಮನೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.ಧ್ರುವ ಸರ್ಜಾ ಅವರು ರೇಣುಕಾಸ್ವಾಮಿ ಕುಟುಂಬಸ್ಥರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿಸಿದ್ದಾರೆ. ಈ ವೇಳೆ ಧ್ರುವ ಸರ್ಜಾ, ಮೃತ ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆಗೆ ಮಾತನಾಡಿದ್ದಾರೆ.

 ಅತ್ತಿಗೆ ಗರ್ಭಿಣಿ ಆಗಿದ್ದಾಗ್ಲೆ ಅಣ್ಣ ಸತ್ತಿದ್ದು, ಆ ನೋವು ನನಗೆ ಗೊತ್ತು, ನಿಮ್ಮ ಜೊತೆಗೆ ನಾವಿದ್ದೇವೆ. ಏನೇ ಸಹಾಯ ಬೇಕಾದರೂ ನಮ್ಮನ್ನು ಕೇಳಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ನಂತರ ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಹಾಗೂ ತಂಡದವರು ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಹೋಗಿದ್ದು, ಧ್ರುವ ಅಭಿಮಾನಿ ಸಂಘದವರು ಹಣ ನೀಡಿ, ರೇಣುಕಾಸ್ವಾಮಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಬಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಹ ನಾಲ್ಕು ತಿಂಗಳ ಗರ್ಭಿಣಿಯಾಗಿರುವ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡುವಂತೆಯೂ ಒತ್ತಾಯಿಸಿದ್ದಾರೆ. ಮನೆಗೆ ಆಧಾರವಾಗಿದ್ದ ಮಗನನ್ನಯ ಕಳೆದುಕೊಂಡು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಪತ್ನಿ ಈಗ ಗರ್ಭಿಣಿ. ಮನೆ ನಡೆಸುವುದು ಹೇಗೆ ಎನ್ನುವ ಪರಿಸ್ಥಿತಿ ಎದುರಾಗಿದೆ.

ಬಿಜೆಪಿ ಪಕ್ಷದಿಂದ ಎರಡು ಲಕ್ಷ ಸಹಾಯಧನವನ್ನ ನೀಡಿದ್ದು, ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಕುಟುಂಬ ನಿರ್ವಹಣೆಗಾಗಿ ತಮ್ಮ  ಮಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಇವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.