ಶಾಲಾ ಕಾಲೇಜು ರಜೆ ನೀಡುವಂತೆ ಜಿಲ್ಲಾಡಳಿತ ಆದೇಶ, ಬಾರಿ ಮಳೆಗೆ ಕರುನಾಡು ತತ್ತರ

 | 
Nd

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಾಳೆಯಿಂದ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ನೋಡುವುದಾದರೆ ಜುಲೈ 5 ರಂದು ಮಳೆನಾಡು ಪ್ರದೇಶವನ್ನ ಹೊಂದಿರುವ ಜಿಲ್ಲೆಗಳಾದ.. ಚಿಕ್ಕಮಗಳೂರು, ಹಾಸನ, ಕೊಡಗು, ಮಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಿಂಚು ಗುಡುಗಿನೊಂದಿಗೆ ಬಿರುಗಾಳಿ ಸಹಿತ ಮಳೆಯಾಗಲಿದೆ.

ಇನ್ನು, ಕರಾವಳಿ ಕರ್ನಾಟಕ ಮತ್ತು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಸೇರಿದಂತೆ ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಂದು ರಜೆ ಘೊಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜುಲೈ 4 ರಿಂದ 5 ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಇನ್ನೂ ನಾಲ್ಕು ದಿನಗಳ ವರೆಗೆ ಬಿರುಸಿನ ಮಳೆಯಾಗುವ ಮುನ್ಸೂಚನೆ ಇದ್ದು, ಜುಲೈ 6ರಂದು ಆರೆಂಜ್‌ ಅಲರ್ಟ್ ಹಾಗೂ ಜುಲೈ 7 ಮತ್ತು 8ರಂದು ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳು ಸೇರಿದಂತೆ ಎಲ್ಲ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಜುಲೈ 5ರಂದೂ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರ ವಹಿಸಬೇಕು. 

ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಬಾರದು. ಪ್ರವಾಸಿಗರು, ಸಾರ್ವಜನಿಕರು ನದಿ ಅಥವಾ ಸಮುದ್ರ ತೀರಕ್ಕೆ ತೆರಳಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.