ತನ್ನ ಪಕ್ಕದವನಿಗೆ ಹುಚ್ಚಾ ಎಂದ ಡಿಕೆ; ಕಿಲಕಿಲ ನಕ್ಕ ರಂಗಣ್ಣ
ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಅವರನ್ನು ನಾನು ಮೊದಲ ಬಾರಿ ನೋಡಿದಾಗ ಯಾರೋ ಹುಚ್ಚ ಇರಬೇಕು ಎಂದುಕೊಂಡಿದ್ದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪರಿಶ್ರಮ ನೀಟ್ ಅಕಾಡೆಮಿಯ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಶಿವಶಂಕರ್ ಅವರು ಪ್ರದೀಪ್ ಈಶ್ವರ್ ಅವರನ್ನು ಅದೊಂದು ದಿನ ನನ್ನ ಬಳಿಗೆ ಕರೆದುಕೊಂಡು ಬಂದಿದ್ದರು.
ನಾನು ಪ್ರದೀಪ್ ಅವರ ಗಡ್ಡ, ಕೆದರಿದ ತಲೆಗೂದಲು ನೋಡಿ ಯಾರೋ ಹುಚ್ಚನನ್ನು ಕರೆದುಕೊಂಡು ಬಂದಿದ್ದೀರಿ ಎಂದು ಕೇಳಿಬಿಟ್ಟಿದ್ದೆ ಎಂದು ಜ್ಞಾಪಿಸಿಕೊಂಡರು.ಆತ ಹುಚ್ಚನಲ್ಲ. ಬುದ್ಧಿವಂತ. ನಮ್ಮ ಪಕ್ಷಕ್ಕೆ ಉಪಯೋಗ ಆಗುತ್ತಾನೆ. ದಯವಿಟ್ಟು ಒಂದು ಅವಕಾಶ ಕೊಡಿ ಎಂದು ಕೇಳಿದ್ದರು. ಆಗ, ನಾನು ಅವರಿಗೆ ಚಿಕ್ಕಬಳ್ಳಾಪುರದಲ್ಲಿ ಟಿಕೆಟ್ ಕೊಡಲು ನಿರ್ಧರಿಸಿದ್ದೆ. ನಾನು ಕೊಟ್ಟ ಅವಕಾಶವನ್ನು ಸದ್ಬಳಕೆ ಮಾಡಿಕೊಂಡ ಅವರು, ಕಳೆದ ವರ್ಷ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ವಿಧಾನಸಭೆಯಲ್ಲಿ ತಮ್ಮದೇ ಆದ ವಿಚಾರಗಳನ್ನು ಸದನದ ಮುಂದಿಡುತ್ತಿದ್ದಾರೆ ಎಂದು ಹೊಗಳಿದರು.
ಪ್ರಪಂಚವನ್ನು ಬದಲಿಸುವ ಏಕೈಕ ಅಸ್ತ್ರವೆಂದರೆ ಅದು ಶಿಕ್ಷಣ ಮಾತ್ರ. ಈ ಅಸ್ತ್ರವನ್ನು ಬಳಸಿಕೊಂಡು ಪರಿಶ್ರಮ ಅಕಾಡೆಮಿಯಲ್ಲಿ ಮಕ್ಕಳನ್ನು ವಿಶೇಷ ರೀತಿಯಲ್ಲಿ ತಯಾರು ಮಾಡಲಾಗುತ್ತಿದೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ 250 ಸೀಟುಗಳಿದ್ದರೆ ಅದರಲ್ಲಿ 150ರಿಂದ 180 ಸೀಟುಗಳನ್ನು ಇಲ್ಲಿನ ವಿದ್ಯಾರ್ಥಿಗಳೇ ಪಡೆಯುತ್ತಾರೆ ಎಂದು ಹೇಳಿದರೆ ಈ ಸಂಸ್ಥೆಯಲ್ಲಿ ಶಿಕ್ಷಣಕ್ಕೆ ಅದೆಷ್ಟು ಪ್ರಾಮುಖ್ಯತೆಯಿದೆ. ಪ್ರದೀಪ್ ಈಶ್ವರ್ ಅವರು ಎಷ್ಟು ಶ್ರಮದಿಂದ ಈ ಸಂಸ್ಥೆಯನ್ನು ಈ ಮಟ್ಟಕ್ಕೆ ತಂದಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.
ಪ್ರದೀಪ್ ಮಾಡಿರುವ ಸಾಧನೆ ಸಣ್ಣದಲ್ಲ. ಇಂಥ ದೊಡ್ಡ ಸಾಧನೆಯನ್ನು ಯಾರೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ ಡಿಕೆಶಿ, ಈಗ ಪ್ರದೀಪ್ ಈಶ್ವರ್ ಅವರು ತಮ್ಮ ಕೋಚಿಂಗ್ ಕೇಂದ್ರಕ್ಕೆ ಸ್ವಂತ ಕಟ್ಟಡ ಬೇಕೆಂದು ಮನವಿ ಮಾಡಿದ್ದಾರೆ. ನನಗೆ ನೀವು ಅಧಿಕಾರ ಕೊಟ್ಟಿದ್ದೀರಿ. ನಾನು ಸಂಸ್ಥೆಯ ಸ್ವಂತ ಕಟ್ಟಡಕ್ಕಾಗಿ ಜಾಗ ಮಂಜೂರು ಮಾಡಿಕೊಡುತ್ತೇನೆ ಎಂದು ವಾಗ್ದಾನ ಮಾಡಿದರು.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.