ಕುಂಭವೇಳದಲ್ಲಿ ಮೂರು ಬಾರಿ ಮುಳುಗಿ ‌ಎದ್ದ ಡಿಕೆಶಿ, ಸನಾತನ ಧರ್ಮದ ಒಲವು ನೀಡುತ್ತ ಪಕ್ಷ ಬದಲಾವಣೆ ಸೂಚನೆ

 | 
Jj
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಕುಟುಂಬ ಸಮೇತರಾಗಿ ತೆರಳಿದ್ದಾರೆ. ಈಗಾಗಲೇ ಡಿಕೆಶಿ ಪುತ್ರಿ ಐಶ್ವರ್ಯಾ ಅವರು ಪ್ರಯಾಗ್‌ರಾಜ್‌ಗೆ ತೆರಳಿ ಪವಿತ್ರ ಸ್ನಾನ ಮಾಡಿದ್ದರು. ಈಗ ಡಿ.ಕೆ.ಶಿವಕುಮಾರ್‌ ಅವರು ಪ್ರಯಾಗ್‌ರಾಜ್‌ಗೆ ತೆರಳಿದ್ದಾರೆ.
ಇತ್ತೀಚಿಗಷ್ಟೇ ಕುಟುಂಬದೊಂದಿಗೆ ಪ್ರಯಾಗ್‌ರಾಜ್‌ನತ್ತ ಪ್ರಯಾಣ ಬೆಳೆಸಿದ್ದಾರೆ. ಅವರು ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಪವಿತ್ರ ಸ್ನಾನ ಮಾಡಿ ಮತ್ತೆ ರಾಜ್ಯಕ್ಕೆ ಮರಳಲಿದ್ದಾರೆ. ಅಲ್ಲದೆ ಉತ್ತರಪ್ರದೇಶದ ರಾಜಕಾರಣಿಗಳೊಂದಿಗೆ ಡಿ.ಕೆ.ಶಿವಕುಮಾರ್ ಅವರು ಉತ್ತಮ ಸಂಪರ್ಕ ಹೊಂದಿರುವ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರ ಸಚಿವರು ಬೆಂಗಳೂರಿಗೆ ಬಂದು ಡಿಕೆಶಿ ಅವರನ್ನು ಮಹಾಕುಂಭ ಮೇಳಕ್ಕೆ ಆಹ್ವಾನಿಸಿದ್ದರು.
ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಿಕಲಚೇತನರ ಸಬಲೀಕರಣ ಸಚಿವರಾದ ನರೇಂದ್ರ ಹಾಗೂ ಹಣಕಾಸು ಸಚಿವ ಸುರೇಶ್‌ ಖನ್ನಾ ಅವರು ಬೆಂಗಳೂರಿಗೆ ಬಂದು, ಡಿಕೆ ಶಿವಕುಮಾರ್‌ ಅವರನ್ನ ಗೃಹಕಚೇರಿಯಲ್ಲಿ ಭೇಟಿಯಾಗಿ ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾಕುಂಭ ಮೇಳಕ್ಕೆ ವಿಶೇಷ ಆಹ್ವಾನ ನೀಡಿದ್ದರು. ಅದರಂತೆ ಡಿಕೆ ಶಿವಕುಮಾರ್‌ ಅವರು ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು. ಹೀಗಾಗಿ ಇಂದು ಮುಂಜಾನೆಯೇ ಅವರು ಪ್ರಯಾಗ್‌ರಾಜ್‌ಗೆ ವಿಮಾನದಲ್ಲಿ ತೆರಳಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಅವರು ನಮ್ಮ ಧರ್ಮದ ನಂಬಿಕೆಯಿಂದ ಇಂದು ಮಹಾಕುಂಭ ಮೇಳಕ್ಕೆ ಹೋಗುತ್ತಿದ್ದೇನೆ ಎಂದಿದ್ದಾರೆ. ಕರ್ನಾಟಕದಲ್ಲಿಯೂ ಕುಂಭಮೇಳ ನಡೆಯುತ್ತಿದೆ. ಅದಕ್ಕೆ ನನಗೂ ಆಹ್ವಾನ ಬಂದಿದೆ. ಅಲ್ಲಿಗೂ ನಾನು ಭೇಟಿ ಕೊಡುತ್ತೇನೆ. ನಮ್ಮ ಕರ್ನಾಟದ ಕಾವೇರಿ ಕುಂಭಮೇಳದಲ್ಲಿ ನಾನು ಖಂಡಿತವಾಗಿಯೂ ಭಾಗಿಯಾಗುತ್ತೇನೆ ಎಂದು ಹೇಳಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.