ವಿರಾಟ್ ಕೊಹ್ಲಿ ಜೊತೆ ಡಿಕೆ ಶಿವಕುಮಾರ್ ಭರ್ಜರಿ ಸೆಲ್ಫಿ, ಫಿದಾ ಆದ RCB Team

 | 
Jx
ಕೊನೆಗೂ 18 ವರ್ಷಗಳ ಕಾಯುವಿಕೆಯ ನಂತರ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಸ್ವಾಗತಿಸಿದರು.ಆರ್‌ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇಂದು ವಿಧಾಸೌಧದ ಮುಂದೆ ಭವ್ಯವಾದ ಅಭಿನಂದನಾ ಸಮಾರಂಭ ಆಯೋಜಿಸಿದೆ.
 ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು ಮತ್ತು ಶಾಸಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಜತ್ ಪಟಿದಾರ್ ನೇತೃತ್ವದ ತಂಡವನ್ನು ಸನ್ಮಾನಿಸಲಿದ್ದಾರೆ.ಐಪಿಎಲ್ ಕಪ್ ಜಯಿಸಿ ತವರಿಗೆ ಮರಳಿರುವ RCB ತಂಡಕ್ಕೆ ಬೆಂಗಳೂರಿನಲ್ಲಿ ಅಭಿಮಾನಿಗಳಿಂದಲೂ ಅದ್ದೂರಿ ಸ್ವಾಗತ ದೊರೆತಿದೆ.
ಗುಜರಾತ್​​ನ ಅಹ್ಮದಾಬಾದ್​​ನಿಂದ ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆರ್​ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ಖಾಸಗಿ ಹೋಟೆಲ್ ಗೆ ಕರೆದುಕೊಂಡು ಹೋಗಲಾಗುತ್ತಿದೆ. ಅಲ್ಲಿಂದ ಸಂಜೆ 4 ಗಂಟೆಗೆ ವಿಧಾನಸೌಧಕ್ಕೆ ತೆರಳಲಿದ್ದಾರೆ.
ಆರ್​ಸಿಬಿ ತಂಡವಿದ್ದ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರು ಹಾಗೂ ರಾಜಕಾರಣಿಗಳ ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಅನೇಕರು ಕುಳಿತಿದ್ರು. ಜನರು ಕೂಡ ವೇದಿಕೆ ಮೇಲೆಯೇ ಓಡಾಡ್ತಿದ್ರು. ಈ ವೇಳೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಳಿಗೆ ಹೋಗ್ತಿದ್ದ ಅಭಿಮಾನಿಯ ತಲೆಗೆ ಡಿಸಿಎಂ ಡಿಕೆ ಶಿವಕುಮಾರ್ ಹೊಡೆದಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಮೆಚ್ಚಿನ ಕೋಹ್ಲಿ ಜೊತೆ ಡಿಕೆ ಶಿವಕುಮಾರ್ ಸೆಲ್ಫಿ ಕೂಡ ಪಡೆದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.