ಸಿನಿಮಾ ನಟಿಯರಿಗೆ ಡಿಕೆಶಿ ಖಡಕ್ ವಾರ್ನಿಂಗ್, ಇನ್ನುಮುಂದೆ ಇದೆಲ್ಲ‌ ನಡೆಯಲ್ಲ

 | 
Nx
ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸಿನಿಮಾ ಉತ್ಸವಕ್ಕೆ ಬಾರದಿರುವ ಕನ್ನಡ ಚಿತ್ರರಂಗದ ಕಲಾವಿದರಿಗೆ ನಿನ್ನೆ ವೇದಿಕೆಯಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದರು. ಕನ್ನಡ ನಾಡು ನುಡಿ ವಿಚಾರದಲ್ಲಿ ಸ್ಪಂದಿಸದೇ ಇದ್ದರೆ ನಿಮ್ಮ ನೆಟ್ ಬೋಲ್ಟ್ ಟೈಟ್ ಮಾಡಲು ಗೊತ್ತಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.
ಇನ್ನು ಈದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡಿದ್ದು, ಮತ್ತೊಂದು ಸಿನಿಮಾ ರಂಗದ ಕಲಾವಿದರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ, ಸಿನಿಮಾ ರಂಗದವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನನಗೆ ಗೊತ್ತಿರುವ ಸತ್ಯ ಹೇಳಿದ್ದೇನೆ, ಅವರು ಬೇಕಿದ್ದರೆ ಪ್ರತಿಭಟನೆ ಮಾಡಲಿ, ಹೋರಾಟ ಮಾಡಲಿ ಎನ್ನುವ ಮೂಲಕ ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ.
ನಮ್ಮ ನೀರು, ನಮ್ಮ ಹಕ್ಕಿನ ಹೋರಾಟಕ್ಕೆ ಅವರು ಬಂದಿಲ್ಲ, ನೆಲ ಜಲದ ವಿಚಾರದಲ್ಲಿ ಪಕ್ಷಾತವಾಗಿ ನಾವು ಹೋರಾಟ ಮಾಡಿದ್ದೇವೆ ಎಂದಿರುವ ಡಿಕೆ ಶಿವಕುಮಾರ್, ಮೇಕೆದಾಟು ಯಾತ್ರೆ ಮಾಡುವಾಗ ಯಾರು ಬರಲಿಲ್ಲ. ನೆಲ ಜಲದ ವಿಚಾರದಲ್ಲಿ ಹೋರಾಟ ಮಾಡುತ್ತೇವೆ ಎನ್ನುತ್ತಾರೆ. ಪ್ರೇಮ್, ದುನಿಯಾ ವಿಜಯ್, ಸಾಧುಕೋಕಿಲ ಕೇಸು ಹಾಕಿಸಿಕೊಂಡರು. ಬಿಜೆಪಿಯವರು ಅವರ ಮೇಲೆ ಕೇಸು ಹಾಕಿದರು ಎಂದು ಹೇಳಿದರು
ಇನ್ನು ಸಿನಿಮಾ ರಂಗದವರು ಟೀಕೆ ಮಾಡಲಿ ಅಂತಾನೇ ತಾನು ನಟ್ಟು ಬೋಲ್ಟು ಅಂತ ಪದ ಬಳಕೆ ಮಾಡಿದ್ದು ಎಂದು ಹೇಳಿದರು. ಚಿತ್ರರಂಗಕ್ಕೆ ಒಳ್ಳೆಯದಾಗಲಿ ಅಂತ ಸರ್ಕಾರ ಅಂತಾರಾಷ್ಟ್ರೀಯ ಚಿತ್ರೋತ್ಸವ ಆಯೋಜಿಸಿದ್ದು, ಅವರೇ ಅದರಲ್ಲಿ ಭಾಗವಹಿಸದಿದ್ದರೆ ಹೇಗೆ ಎಂದು ಶಿವಕುಮಾರ್ ಕೇಳಿದರು. ಸಿನಿಮಾದವರಿಗೆ ತಾನು ಸಾಕಷ್ಟು ಸಹಾಯ ಮಾಡಿದ್ದೇನೆ, ಸಹಾಯ ಪಡೆದವರಿಗೆ ಅದು ಚೆನ್ನಾಗಿ ಗೊತ್ತಿದೆ, ಆಯೋಜನೆಯಲ್ಲಿ ಒಂದಷ್ಟು ತಪ್ಪುಗಳಾಗಿರಬಹುದು ಎಂದು ಹೇಳಿದ್ದಾರೆ.