ಗೋವಿಂದ ಅಣ್ಣನಿಗೆ ಮೂರು ನಾಮ ಹಾಕಿ, ಚೈತ್ರ ಬ್ಯಾಂಕ್ ನಲ್ಲಿ ಎಷ್ಟು ಕೋಟಿ FD ಇಟ್ಟಿದ್ದಾಳೆ ಗೊತ್ತಾ

 | 
Hd

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟಿ ಕೋಟಿ ವಂಚಿಸಿರುವ ಆರೋಪದಡಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಸದ್ಯ ಅನಾರೋಗ್ಯ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಸಿಸಿಬಿ, ಹಿಂದೂ ಭಾಷಣಕಾರ, ಯುವ ಬ್ರಿಗೇಟ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ನೋಟಿಸ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಸಿಸಿಬಿ ವಿಚಾರಣೆ ಬೆನ್ನಲ್ಲೇ ಚಕ್ರವರ್ತಿ ಸೂಲಿಬೆಲೆ ಹೆಸರು ಪ್ರಸ್ತಾಪವಾಗಿರೋದ್ರಿಂದ ನೋಟಿಸ್ ನೀಡಲು ಮುಂದಾಗಲಾಗಿದೆ. ಇಂದು ಸಂಜೆ ವೇಳೆಗೆ ಚಕ್ರವರ್ತಿ ಸೂಲಿಬೆಲೆಗೆ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ಚೈತ್ರಾ ಕುಂದಾಪುರ A1 ಆರೋಪಿಯಾಗಿದ್ದು, ಸಿಸಿಬಿ ತೀವ್ರ ವಿಚಾರಣೆಗೊಳಪಡಿಸಿದೆ. ಈ ನಡುವೆ ಆಕೆ ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೈತ್ರಾ ಕುಂದಾಪುರ ಅವರನ್ನು 10 ದಿನಗಳ ಕಾಲ ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ತೀವ್ರ ತನಿಖೆಗೆ ಒಳಪಡಿಸಿದ್ದಾರೆ. ಆದರೆ, ಅವರಿಂದ ಯಾವುದೇ ಹೇಳಿಕೆ ದಾಖಲಿಸಿಕೊಳ್ಳಲು ಇದುವರೆಗೆ ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಯಾವುದೇ ಪ್ರಶ್ನೆ ಕೇಳಿದರೂ ಸ್ವಾಮೀಜಿಯನ್ನು ಕೇಳಿ ಎಲ್ಲಾ ಗೊತ್ತಾಗುತ್ತದೆ ಎಂದು ಚೈತ್ರಾ ಉತ್ತರಿಸುತ್ತಿದ್ದಾರಂತೆ. 

ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ ಹಣ ಪಡೆದು ವಂಚಿಸಿದ ಆರೋಪ ಚೈತ್ರಾ ಮತ್ತು ಆಕೆಯ ತಂಡದ ಮೇಲಿದೆ. ಈ ಬಗ್ಗೆ ಗೋವಿಂದ ಬಾಬು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಆರಂಭದಲ್ಲಿ ಇಬ್ಬರು ಆರೋಪಿಗಳಾದ ಗಗನ್ ಕಡೂರು ಮತ್ತು ಪ್ರಸಾದ್ ಎಂಬುವವರನ್ನು ಬಂಧಿಸಿದ್ದರು.

ತಲೆ ಮರೆಸಿಕೊಂಡಿದ್ದ ಆರೋಪಿಗಳಾದ ಚೈತ್ರಾ ಮತ್ತು ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬವರನ್ನು ಸೆಪ್ಟೆಂಬರ್ 12ರಂದು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ವಶಕ್ಕೆ ಪಡೆದ ಸಿಸಿಬಿ ಪೊಲೀಸರು, ಬೆಂಗಳೂರಿಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಚೈತ್ರಾ ಸೇರಿದಂತೆ ಆರೋಪಿಗಳನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದ್ದಾರೆ.

ಆದರೆ ಚೈತ್ರಾ ಕುಂದಾಪುರ ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರ ಹೆಸರು ಹೊರಗೆ ಬರಲಿದೆ ಎಂದಿದ್ದರು. ಸ್ವಾಮೀಜಿಯೇ ಮುಖ್ಯ, ಅವರ ಬಳಿಯೇ ಎಲ್ಲಾ ಮಾಹಿತಿ ಇದೆ. ದುಡ್ಡಿನ ವ್ಯವಹಾರ ಅವರೇ ಮಾಡ್ತಿದ್ರು ಎಂದು ಸಿಸಿಬಿ ಡಿಸಿಪಿ ಅಬ್ದುಲ್ ಅಹ್ಮದ್‌ ಎದುರು ಕಣ್ಣೀರು ಹಾಕಿದ್ದರು ಎಂದು ತಿಳಿದುಬಂದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.