ಕೋಟ್ಯಾಂತರ ರೂಪಾಯಿ ಒಡೆಯ ಯಶ್ ಅವರ ವರಮಹಾಲಕ್ಷ್ಮಿ ಹಬ್ಬವನ್ನು ಯಾವ ರೀತಿ ಆಚರಿಸಿಕೊಂಡಿದ್ದಾರೆ ಗೊತ್ತಾ
ನಟಿ ರಾಧಿಕಾ ಪಂಡಿತ್ ಅವರು ಈಗ ಕುಟುಂಬಕ್ಕೆ ಪೂರ್ತಿ ಸಮಯ ನೀಡುತ್ತಿದ್ದಾರೆ. ಮಕ್ಕಳಾದ ಆಯ್ರಾ ಮತ್ತು ಯಥರ್ವ್ನ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರ ಜೊತೆಗೆ ಹಬ್ಬ-ಹರಿದಿನಗಳನ್ನು ಸಡಗರದಿಂದ ಅವರು ಆಚರಿಸುತ್ತಿದ್ದಾರೆ.
ಇತ್ತೀಚೆಗೆ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಬಹಳ ಸಡಗರದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಶ್ರದ್ಧೆ-ಭಕ್ತಿಯಿಂದ ಪೂಜೆ ನೆರವೇರಿಸಲಾಗಿದೆ. ಆ ಸಂದರ್ಭದ ಕಲರ್ಫುಲ್ ಫೋಟೋಗಳು ಈಗ ವೈರಲ್ ಆಗಿವೆ. ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋಸ್ ಹಂಚಿಕೊಳ್ಳುತ್ತಾರೆ. ಈ ವಾರ ಅವರು ತಮ್ಮ ಮನೆಯಲ್ಲಿನ ಹಬ್ಬದ ಝಲಕ್ ತೋರಿಸುವಂತಹ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಯಶ್ ಅವರು ಕೆಜಿಎಫ್: ಚಾಪ್ಟರ್ 2 ಬಳಿಕ ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ. ಸದ್ಯಕ್ಕೆ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳ ಜೊತೆ ಸೇರಿ ಅವರು ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ. ರಾಧಿಕಾ ಪಂಡಿತ್ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಿದ್ದರೂ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ.
ಇನ್ಸ್ಟಾಗ್ರಾಮ್ ಮೂಲಕ ಅವರು ಆಗಾಗ ಏನಾದರೂ ಅಪ್ಡೇಟ್ ನೀಡುತ್ತಾ ಇರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರಿಗೆ ದೊಡ್ಡ ಫ್ಯಾನ್ ಫಾಲೋಯಿಂಗ್ ಇದೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 32 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.