CCB ಕಚೇರಿ ಟಾಯ್ಲೆಟ್ ನಲ್ಲಿ ಚೈತ್ರ ಮಾಡಿದ್ದೇನು, ಬಾಯಲ್ಲಿ ನೊರೆ ಬರುವುದಕ್ಕೆ ಕಾರಣ ಏನು ಗೊತ್ತಾ

 | 
Gggg

ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಪ್ರಥಮ ಆರೋಪಿಯಾಗಿರುವ ಭಾಷಣಕಾರ್ತಿ ಚೈತ್ರಾ ಕುಂದಾಪುರ ತೀವ್ರ ಅಸ್ವಸ್ಥರಾದ ಹಿನ್ನೆಲೆ ಅಧಿಕಾರಿಗಳು ಇದೀಗ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚೈತ್ರಾ ಮತ್ತು ಇತರರನ್ನು ಕೋರ್ಟ್‌ 10 ದಿನಗಳ ಅವಧಿಗೆ ಸಿಸಿಬಿ ಕಸ್ಟಡಿಗೆ ಒಪ್ಪಿಸಿತು. ಇದರ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಆಕೆ, ಮೂರ್ಛೆ ಹೋದ ಸ್ಥಿತಿಯಲ್ಲಿದ್ದುದನ್ನು ಕಂಡ ಅಧಿಕಾರಿಗಳು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳಗ್ಗೆ ಸಿಸಿಬಿ ಕಚೇರಿಯಲ್ಲಿ ಚೈತ್ರಾಳನ್ನು ವಿಚಾರಣೆಗೆ ಎಂದು ಕರೆಸಲಾಗಿತ್ತು. 

ಈ ವೇಳೆ ಚೈತ್ರಾ ಎರಡನೇ ಬಾರಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆ ಸಂಪೂರ್ಣ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ವರದಿ ತಿಳಿಸಿದೆ. ಸದ್ಯ ಅಧಿಕಾರಿಗಳು ಚೈತ್ರಾ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧಿತರಾದ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಐದು ಮಂದಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. 

ಪ್ರಕರಣ ಪ್ರಮುಖ ಆರೋಪಿತೆಯಾಗಿರುವ ಚೈತ್ರಾ ಕುಂದಾಪುರ, ರಮೇಶ್, ದೇವರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಬಂಧಿಸಿ ಸೆಪ್ಟೆಂಬರ್​ 14ರಂದು ಬೆಂಗಳೂರಿನ ಸಿಸಿಬಿ ಕಚೇರಿಗೆ ಅಧಿಕಾರಿಗಳು ಕರೆತಂದಿದ್ದರು. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು. 

ಆರೋಪಿಗಳ ವಿರುದ್ಧ 5 ಕೋಟಿಗೂ ಹೆಚ್ಚು ಹಣ ವಂಚನೆ ಇದ್ದು, ಕೃತ್ಯ ಎಸಗಲು ವ್ಯವಸ್ಥಿತವಾಗಿ ಸಂಚು‌ ರೂಪಿಸಿದ್ದರು. ಬಂಧಿತರಿಂದ ಹಣವನ್ನ ರಿಕವರಿ ಮಾಡಿಕೊಳ್ಳಬೇಕಿದೆ. ಈ ಸಂಬಂಧ 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಬೇಕು ಎಂದು ಸಿಸಿಬಿ ಪರ ವಕೀಲರು ಮನವಿ ಮಾಡಿದ್ದರು. ಮನವಿಗೆ ಪುರಸ್ಕರಿಸಿದ ನ್ಯಾಯಾಲಯವು ಸೆ.23ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಮತ್ತೊಬ್ಬ ಆರೋಪಿತ ಗಗನ್ ಕಡೂರು ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.