ಹಿಂದೂತ್ವ ಎಂದು ಹೋರಾಡುವ ಬಡ ಮಕ್ಕಳ ಪರಿಸ್ಥಿತಿ ಏನಾಯಿತು ಗೊತ್ತಾ, ಬಿಜೆಪಿ ಮುಖಂಡರ ಕೆಲಸಕ್ಕೆ‌ ಕಂಗಾಲಾದ ಕರಾವಳಿ

 | 
Gf

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆ ವ್ಯಾಪ್ತಿಯ ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನು ಹಾಕಿ ಬಿಜಿಪಿ ಸೋಲಿಗೆ ಕಾರಣವಾದ ನಾಯಕರಿಗೆ ಶ್ರದ್ಧಾಂಜಲಿಯ ಬ್ಯಾನರ್ ಅನ್ನು ಅಳವಡಿಸಿದ ಪ್ರಕರಣದಲ್ಲಿ ಬಂಧಿತರಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದು ವಿವಾದಕ್ಕೀಡಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ, ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. 

ಹೌದು ಬ್ಯಾನರ್ ಕಟ್ಟಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಕುರಿತು ಮೇ.15 ರಾತ್ರಿ ನರಿಮೊಗರು ನಿವಾಸಿಗಳಾದ ಅಭಿ ಯಾನೆ ಅವಿನಾಶ್, ಶಿವರಾಮ್, ಚೈತ್ರೆಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಅವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸರಿಂದ ವಶದಲ್ಲಿವರಿಗೆ ಹಿಗ್ಗಾಮುಗ್ಗಾ ತಳಿಸಿ ಗಾಯಗೊಳಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಫೊಟೋಗಳು ಹರಿದಾಡಿದವು. ಗಾಯಗೊಂಡ ಯುವಕರ ರಕ್ತಸಿಕ್ತ ಚಿತ್ರಗಳು ಹಾಗೂ ತಡರಾತ್ರಿ ಪುತ್ತೂರು ಡಿವೈಎಸ್ ಪಿ ಕಚೇರಿಯಿಂದ ನಡೆದಾಡಲೂ ಕಷ್ಟ ಪಡುವ ಯುವಕರ ವಿಡಿಯೋ ತುಣುಕು ಸಾಮಾಜಿಕ ಜಾಲ ತಾಣದಲ್ಲಿ ಕಾಣಿಸಿಕೊಂಡವು. 

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಠಾಣೆಯಿಂದ ಬಿಡಿಸಿಕೊಂಡು ಬಾರದೇ ಇದ್ದಿದ್ದರೆ, ಮತ್ತೊಂದು ಅನಾಹುತವಾಗುತ್ತಿತ್ತು ಎಂಬ ಮಾತುಗಳು ಕೇಳಿಬಂದವು.ಗಾಯಾಳುಗಳನ್ನು ಭೇಟಿ ಮಾಡಲು ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ  ನಾನಿದ್ದೇನೆ ಎಂದು ಧೈರ್ಯ ತುಂಬಿದರು. ಈ ಸಂದರ್ಭ ಮಾತನಾಡಿದ ಹಿಂದು ಸಂಘಟನೆ ಮುಖಂಡ ಅರುಣ್ ಪುತ್ತಿಲ, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಮುಂದಾಗುವ ಅನಾಹುತಗಳಿಗೆ ಅವರೇ ಹೊಣೆ ಎಂದರು. 

ಗಾಯಾಳುಗಳನ್ನು ನೋಡಲು ಸ್ಥಳೀಯ ಮುಖಂಡರಲ್ಲದೆ, ಚಕ್ರವರ್ತಿ ಸೂಲಿಬೆಲೆ ಅವರೂ ಆಗಮಿಸಿ ಧೈರ್ಯ ನೀಡಿದ್ದಾರೆ. ಇನ್ನು ಪುತ್ತೂರು ಘಟನೆ ರಾಜ್ಯದಾದ್ಯಂತ ಸುದ್ದಿ ಮಾಡಿತು. ಸಾಮಾಜಿಕ ಜಾಲತಾಣದಲ್ಲಂತೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸ್ಥಳೀಯ ಮಾಜಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ಧ ತೀವ್ರ ಟೀಕಾಪ್ರಹಾರ ನಡೆದಿದೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.