ಚುನಾವಣೆ ಬರುತ್ತಿದ್ದಂತೆ ಮತ್ತೆ ಪ್ರತ್ಯಕ್ಷರಾದ ಪ್ರಕಾಶ್ ರೈ, ಮೋದಿ ಬಗ್ಗೆ ಹೇಳಿದ್ದೇನು ಗೊತ್ತಾ
ಬಹುಭಾಷಾ ನಟ ಪ್ರಕಾಶ್ ರಾಜ್ ಸಿನಿಮಾಗಳಿಗಿಂತ ಹೆಚ್ಚಾಗಿ ವಿವಾದಾತ್ಮಕ ಹೇಳಿಕೆಯಿಂದಲೇ ಹೆಚ್ಚು ಸುದ್ದಿಯಲ್ಲಿ ಇರುತ್ತಾರೆ. ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಸಿಡಿದೇಳು ಪ್ರಕಾಶ್ ರಾಜ್, ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ’ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರಕಾಶ್ ಆಗಾಗ ಒಂದಲ್ಲ ಒಂದು ವಿಚಾರದ ಬಗ್ಗೆ ಕಮೆಂಟ್ ಮಾಡುತ್ತಲೇ ಇರುತ್ತಾನೆ. ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿಯವರನ್ನು ಟಾರ್ಗೆಟ್ ಮಾಡಿದ್ದಾರೆ.
ಪ್ರಕಾಶ್ ರಾಜ್ ‘ಮೇರಿ ಮಾತಿ ಮೇರಾ ದೇಶ್’ ಅಭಿಯಾನಕ್ಕೆ ಸಂಬಂಧಿಸಿದ ಪ್ರಧಾನಿ ಮೋದಿಯವರ ವೀಡಿಯೊವನ್ನು ಮರು-ಶೇರ್ ಮಾಡಿದ್ದು, ಈ ಕಾರಣಕ್ಕಾಗಿ ಅವರು ಮತ್ತೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಟಾಕಿಂಗ್ ಪಾಯಿಂಟ್ ಆಗಿದ್ದಾರೆ. 2019 ರಲ್ಲಿ ಮಾತಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಇವರು ಇದೀಗ ಮಂಗಳೂರು ನಗರದ ತೊಕ್ಕೊಟ್ಟಿನ ಯುನಿಟಿ ಮೈದಾನದಲ್ಲಿ ನಡೆದ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿದ ಬಹುಭಾಷಾ ನಟ ಪ್ರಕಾಶ್ ರೈ ಇಡೀ ಭಾಷಣದುದ್ದಕ್ಕೂ ಹೆಸರೆತ್ತದೆ ಪರೋಕ್ಷವಾಗಿ ಪ್ರಧಾನಿ ಮೋದಿಯವರ ವಿರುದ್ಧ ಏಕವಚನದಲ್ಲಿಯೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹಿಂದೆ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುವ ನಾಯಕರಿದ್ದರು. ಆದರೆ ಈಗ ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕನಿದ್ದಾನೆ. ನಮ್ಮ ದೇಶದಲ್ಲಿ ಎಂಥಹ ನಾಯಕನಿದ್ದಾನೆ. ಆತ ದೇಶವನ್ನು ಹೇಗೆ ಮಂಗ ಮಾಡುತ್ತಿದ್ದಾನೆ ಅಂದರೆ 2019ರಲ್ಲಿ ಗುಹೆ ಸೇರಿಕೊಂಡ. ಈಗ ಕ್ಯಾಮರಾ ಹಿಡಿದುಕೊಂಡು ನೀರೊಳಗೆ ಸೇರಿದ್ದಾನೆ.
ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ದಿನಕ್ಕೆ ಐದು ಕಾಸ್ಟ್ಯೂಮ್ ಚೇಂಜ್ ಮಾಡುತ್ತಾನೆ. ಕರ್ಕಶವಾದ ಲೌಡ್ ಸ್ಪೀಕರ್ ಅವನು. ಈತ ವಂದೇ ಭಾರತ್‌ಗೆ ಬಾವುಟ ತೋರಿಸಿದಷ್ಟು ಬಾವುಟವನ್ನು ಸ್ಟೇಷನ್ ಮಾಸ್ಟರ್ ಸಹ ತೋರಿಸಿರಲಿಕ್ಕಿಲ್ಲ ಎಂದು ಏಕವಚನದಲ್ಲಿಯೇ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಲಾವಿದನಾಗಿ ಮಾತನಾಡಬೇಕಾಗುವುದು ನನ್ನ ಜವಾಬ್ದಾರಿ. ಸಮಸ್ಯೆಗಳಾದಾಗ ಬಂದು ನಾನು ನಿಲ್ಲಬೇಕಿದೆ. ದೇಹಕ್ಕಾದ ಗಾಯಗಳು ಸುಮ್ಮನಿದ್ದರೂ ಶಮನವಾಗುತ್ತದೆ. ಆದರೆ ದೇಶಕ್ಕಾದ ಗಾಯ ನಾವು ಸುಮ್ಮನಿದ್ದಷ್ಟು ಹೆಚ್ಚಾಗುತ್ತದೆ. ಒಬ್ಬ ಕಲಾವಿದ ಮೌನವಾದರೆ ಇಡೀ ಸಮಾಜ ಮೌನವಾದಂತೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟವರಲ್ಲಿ ಅಧಿಕಾರದ ಶಕ್ತಿ ಇದೆ. ಪ್ರಜಾಪ್ರಭುತ್ವದಲ್ಲಿ ಸೂಕ್ಷ್ಮತೆ ಇರಬೇಕು ಎಂದು ನಟ ಪ್ರಕಾಶ್ ರಾಜ್ ಹೇಳಿ ಜನರಿಂದ ಬಾಯಿಗೆ ಬಂದಂತೆ ಉಗಿಸಿಕೊಂಡಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.