ಸೌಜನ್ಯ ಪ್ರಕರಣದ ಬಗ್ಗೆ ಪ್ರಕಾಶ್ ರಾಜ್ ಹೇಳಿದ್ದೇನು ಗೊತ್ತಾ, ಮೆಚ್ಚಿಕೊಂಡ ಕನ್ನಡಿಗರು

 | 
Bd

11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗಬೇಕು ಎನ್ನುವ ಕೂಗು ರಾಜ್ಯದೆಲ್ಲೆಡೆ ಜೋರಾಗಿದೆ. ಈ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಮತ್ತೆ ಹೋರಾಟಗಳು ಆರಂಭವಾಗಿವೆ. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮತ್ತೆ ಹೋರಾಟಗಳು ಆರಂಭವಾಗಿವೆ. ಈ ಪ್ರಕರಣ ಸಂಬಂಧ 11 ವರ್ಷಗಳ ಹಿಂದೆ ಬಂಧಿತನಾಗಿದ್ದ ಸಂತೋಷ್‌ ರಾವ್‌, ದೋಷಮುಕ್ತ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಮತ್ತೆ ಸೌಜನ್ಯ ಪ್ರಕರಣ ಮುನ್ನೆಲೆಗೆ ಬಂದಿದೆ.‌ ಶಿವಮೊಗ್ಗ ನಗರದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧರ್ಮದ ಸೋಗಿನವರು ತಪ್ಪು ಮಾಡಿದರೆ ಅದನ್ನು ತನಿಖೆ ಮಾಡುವುದು ಸರಿಯಾಗಿಯೇ ಇದೆ ಎಂದು ಹೇಳಿದ್ದಾರೆ.

ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ? ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ. ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ಹೇಳಿದ್ದಾರೆ. ಧರ್ಮಾಧಿಕಾರಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹ ಕೇಳಿ ಬರುತ್ತಿದೆ. ಇದು ತನಿಖೆಯ ಭಾಗವಾಗಿದ್ದರೆ, ನಿಜಾಂಶ ತಿಳಿಯುವ ಅವಶ್ಯಕತೆ ಇದ್ದರೆ ಮಾಡಲಿ. ಈ ಬಗ್ಗೆ ನನ್ನ ಆಕ್ಷೇಪವೇನೂ ಇಲ್ಲ. ಧರ್ಮಸ್ಥಳ, ಧರ್ಮ ಬಿಡಿ ಎಂದು ನಾನು ಹೇಳಲು ಬರುವುದಿಲ್ಲ. ಆದರೆ, ಕೊನೆಯದಾಗಿ ಧರ್ಮ ಉಳಿಯಬೇಕು ಎಂದಿದ್ದಾರೆ.

ಇತ್ತೀಚೆಗೆ ಕನ್ನಡ ಚಿತ್ರರಂಗದ ಕೆಲವು ನಟರು ಕೂಡ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಮಾಡಿದ್ದಾರೆ. ದುನಿಯಾ ವಿಜಯ್ ಹಾಗೂ ಕನ್ನಡ ಖ್ಯಾತ ನಟ ದಿವಂಗತ ಟೈಗರ್​ ಪ್ರಭಾಕಾರ್ ಅವರ​ ಮಗ ನಟ ವಿನೋದ್​ ಟೈಗರ್​ ಪ್ರಭಾಕರ್​ ​ಅವರು ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ಧರ್ಮಸ್ಥಳಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.