ಅಲ್ಪಸಂಖ್ಯಾತರಿಗೆ ಭರ್ಜರಿ ಆಫರ್ ಕೊಟ್ಟ ಸಿದ್ದರಾಮಯ್ಯ, ತಲೆಕೆಡಿಸಿಕೊಂಡ ರಂಗಣ್ಣ ಹೇಳಿದ್ದೇನು ಗೊತ್ತಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ, ರಾಜ್ಯದ ವಕ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಹಾಗೂ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಎಂಬ ಬಂಗಾರದ ಮನುಷ್ಯ ಸಿನಿಮಾ ಗೀತೆಯೊಂದಿಗೆ ಬಜೆಟ್ ಆರಂಭಿಸಿದ ಸಿದ್ದರಾಮಯ್ಯ, 2024ನೇ ಸಾಲಿನ ಪೂರ್ಣಾವ ಬಜೆಟ್‍ನಲ್ಲಿ ಅಲ್ಪಸಂಖ್ಯಾತರು ಹಾಗೂ ಕ್ರಿಶ್ಚಿಯನ್ ಸಮಯದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ., ರಾಜ್ಯದ ವಕ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ., ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ., ಜೈನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ ರೂ., ಬೀದರ್ ಶ್ರೀನಾನಕ್ ಝೀರಾ ಸಾಹೇಬ್ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ರೂ. ಘೋಷಿಸಿದ್ದಾರೆ.
ಅಲ್ಲದೇ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 100 ಸಂಖ್ಯಾಬಲವುಳ್ಳ 100 ಮೆಟ್ರಿಕ್, ಬಾಲಕ/ಬಾಲಕಿಯರ ಪ್ರಾರಂಭಿಸಲಾಗುವುದು. ನಂತರದ ವಿದ್ಯಾರ್ಥಿ ನಿಲಯಗಳನ್ನು, 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು.
ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್‍ಎಫ್‍ಸಿ ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗಿದೆ.
ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆಎಂಡಿಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗಿದೆ. ಇನ್ನು ಇದನ್ನು ಖಂಡಿಸಿರುವ ರಂಗಣ್ಣ ಅವರು ಹಿಂದೂಗಳಿಗೆ ಹಿಂದೆ ಸರಿಸಿ ಎಲ್ಲರಿಗು ನೀಡಿದ್ದೀರಿ ಎಂದು ಕಿಡಿ ಕಾರಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.