ಮುದ್ದಾಗಿರುವ ಅಂಗನವಾಡಿ ಟೀಚರ್ ಬಳಿ ಪುಟ್ಟ ಬಾಲಕ ಕೇಳಿದ್ದೇನು ಗೊತ್ತಾ
Feb 5, 2025, 13:14 IST
|

ಈ ಕ್ಯೂಟ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಈ ಬಗ್ಗೆ ಕೇರಳದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ಕೂಡ ನೀಡಿದ್ದಾರೆ.ವೈರಲ್ ವಿಡಿಯೋದಲ್ಲಿ, ಕ್ಯಾಪ್ ಧರಿಸಿರುವ ಶಂಕು, ನನಗೆ ಅಂಗನವಾಡಿಯಲ್ಲಿ ಉಪ್ಮಾ ಬದಲಿಗೆ ಬಿರಿಯಾನಿ ಮತ್ತು ಪೊರಿಚಾ ಕೋಜಿ ಬೇಕು ಎಂದು ಹೇಳುತ್ತಿದ್ದಾನೆ. ಈ ಬಾಲಕನ ವಿನಂತಿಯು ಎಷ್ಟು ಗಮನ ಸೆಳೆಯಿತು ಎಂದರೆ ಕೆಲವರು ಅವರಿಗೆ ಬಿರಿಯಾನಿ ಮತ್ತು ಚಿಕನ್ ಫ್ರೈ ಕಳಿಸಲು ಸಹ ಮುಂದಾಗಿದ್ದಾರೆ.
ಬಾಲಕ ಈ ವಿಡಿಯೋ ವೈರಲ್ ಆಗುತ್ತಲೇ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವೆ ವೀಣಾ ಜಾರ್ಜ್, 'ಮಕ್ಕಳ ಪೋಷಣೆಯನ್ನು ಖಚಿತಪಡಿಸಿಕೊಳ್ಳಲು ಅಂಗನವಾಡಿಗಳು ಈಗಾಗಲೇ ವಿವಿಧ ಆಹಾರ ಪದಾರ್ಥಗಳನ್ನು ಒದಗಿಸುತ್ತಿವೆ. ಅದಾಗ್ಯೂ ಈ ಸರ್ಕಾರದ ಅಡಿಯಲ್ಲಿ ಅಂಗನವಾಡಿಗಳ ಮೂಲಕ ಮೊಟ್ಟೆ ಮತ್ತು ಹಾಲು ನೀಡುವ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮನ್ವಯದಲ್ಲಿ ಸ್ಥಳೀಯ ಸಂಸ್ಥೆಗಳು ಅಂಗನವಾಡಿಗಳಲ್ಲಿ ವಿವಿಧ ಆಹಾರಗಳನ್ನು ಒದಗಿಸುತ್ತಿವೆ ಎಂದು ಹೇಳಿದ್ದಾರೆ.
ಕೇರಳದಲ್ಲಿ ಅಂಗನವಾಡಿಗಳ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸಲು ಸರ್ಕಾರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಮಕ್ಕಳ ಪೋಷಣೆಗೆ ಪೂರಕವಾಗಿ ಊಟ ನೀಡಲಾಗುತ್ತಿದೆ. ಮೊಟ್ಟೆ ಮತ್ತು ಹಾಲನ್ನು ಸಹ ಸರ್ಕಾರ ನೀಡುತ್ತಿದೆ. ಮಕ್ಕಳು ಪೌಷ್ಟಿಕ ಆಹಾರದಿಂದ ಆರೋಗ್ಯದ ಪ್ರಯೋಜನ ಪಡೆಯಲು ಸಹಕಾರಿಯಾಗಿದೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,13 Mar 2025