ಪ್ರದೀಪ್ ಈಶ್ವರ್ ಬಳಿ‌ ಸಹಾಯ ಕೇಳಿದ ಮುಸ್ಲಿಂ ಬಾಂಧವರು, ರೊಚ್ಚಿಗೆದ್ದ ಎಮ್ ಎಲ್ ಎ ಹೇಳಿದ್ದೇನು ಗೊತ್ತಾ

 | 
ರ್

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ನೂತನವಾಗಿ ಆಯ್ಕೆಯಾಗಿರುವ ಶಾಸಕ ಪ್ರದೀಪ್‌ ಈಶ್ವರ್‌ ಈಗ ನಮಸ್ತೆ ಚಿಕ್ಕಬಳ್ಳಾಪುರ ಹೆಸರಲ್ಲಿ ಗ್ರಾಮಗಳಿಗೆ ಭೇಟಿ ನೀಡುವ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ. ಗುರುವಾರ ತಾಲೂಕಿನ ಮೈಲಪ್ಪನಹಳ್ಳಿ ವ್ಯಾಪ್ತಿಯಲ್ಲಿ ಮನೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಬೆಳಗ್ಗೆ 6 ಗಂಟೆಗೆ ಗ್ರಾಮಕ್ಕೆ ಭೇಟಿ ನೀಡಿದ ಪ್ರದೀಪ್‌ ಈಶ್ವರ್‌ ಪ್ರತಿಮನೆಗೂ ಭೇಟಿ ನೀಡಿ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡಿದರು. 

ಸ್ಥಳದಲ್ಲೇ ಆಗದಂತಹ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಹೇಳಿ ಸರಿಪಡಿಸುವ ಕೆಲಸ ಮಾಡಿದರು. ಇದೇ ವೇಳೆ ಮಾತನಾಡಿದ ಶಾಸಕ ಪ್ರದೀಪ್‌ ಈಶ್ವರ್‌, ನಾನು ನಾಲ್ಕು ವರ್ಷ ಸುಮ್ಮನಿರುವ ಶಾಸಕನಲ್ಲ. ಪ್ರತಿ ದಿನ ಜನರ ಒಳಿತಿಗಾಗಿ ಕೆಲಸ ಮಾಡುತ್ತೇನೆ. ಕ್ಷೇತ್ರದ ಪ್ರತಿ ಮನೆಗೂ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ದನಿಯಾಗುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಕ್ಷೇತ್ರದ ಪ್ರತಿಯೊಬ್ಬರ ಸಮಸ್ಯೆಗೂ ದನಿಯಾಗುವ ಕೆಲಸ ಮಾಡುತ್ತೇನೆ. ಸರಕಾರದ ಸೌಲಭ್ಯಗಳು ಪ್ರತಿಯೊಬ್ಬರಿಗೂ ಸಿಗಬೇಕು. 

ಈ ನಿಟ್ಟಿನಲ್ಲಿ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದೇನೆ ಎಂದಿದ್ದಾರೆ. ಇನ್ನು ಸಮಸ್ಯೆ ಕುರಿತು ಹೇಳಿಕೊಂಡು ಬಂದ ಇಬ್ಬರು ಮುಸ್ಲಿ ಮಹಿಳೆಯರಬಳಿ ನಾನು ಬಂದು ನೋಡ್ಕೋತೀನಿ ನೀವು ನೆಮ್ಮದಿಯಾಗಿ ಮನೆಗೆ ಹೋಗಿ ಎಂದು ಅವರನ್ನು ಮನೆಗೆ ಕಳುಹಿಸಿ ಅವರ ಸಮಸ್ಯೆಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ. ನಂತರದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತೇನೆ. ಪ್ರಾಮಾಣಿಕತೆಯಿಂದ ಕ್ಷೇತ್ರದ ಅಭವೃದ್ಧಿಗೆ ಶ್ರಮಿಸುತ್ತೇನೆ. ಯಾವುದೇ ಕಾರಣಕ್ಕೂ ದ್ವೇಷ ರಾಜಕಾರಣ ಮಾಡಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು. 

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮತ ಎಣಿಕೆ ಕೇಂದ್ರದ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜನರ ಆಶೀರ್ವಾದಕ್ಕೆ ನಾನು ಚಿರಋಣಿಯಾಗಿದ್ದೇನೆ. ನನ್ನದೇನಿದ್ದರೂ ಇನ್ನೂ ಅಭಿವೃದ್ಧಿ ಕೆಲಸ ಮಾಡುವುದಷ್ಟೇ ಗುರಿ. ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತೇನೆ ಎಂದರು. ನಾನು ಯಾವುದೇ ಕಾರಣಕ್ಕೂ ದ್ವೇಷ ರಾಜಕಾರಣ ಮಾಡಲ್ಲ. ಇದು ಜನರ ಗೆಲುವು. 

ಕಾಂಗ್ರೆಸ್‌ ಪಕ್ಷದ ಗೆಲುವು. ಧರ್ಮ ಮತ್ತು ಅಧರ್ಮದ ನಡುವೆ ನಡೆದ ಸಮರದಲ್ಲಿ ಧರ್ಮ ಗೆದ್ದಿದೆ ಅಷ್ಟೇ. ಕಾಂಗ್ರೆಸ್‌ನಿಂದ ಈ ಕ್ಷೇತ್ರದಿಂದ ಯಾರೇ ಸ್ಪರ್ಧಿಸಿದ್ದರೂ ಗೆಲ್ಲುತ್ತಿದ್ದರು. ಇದರಲ್ಲಿ ಯಾವುದೇ ಸಂಶಯವಿಲ್ಲ. ಇದು ಕಾಂಗ್ರೆಸ್‌ ಗೆಲುವು ಎಂದು ತಿಳಿಸಿದ್ದಾರೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.