ಇನ್ನು ಮುಂದೆ ಹಿಂದೂ ದೇವಾಲಯದ ಕಾಣಿಕೆ ಹಣ ಎಲ್ಲಿಗೆ ಹೋಗುತ್ತದೆ ಗೊತ್ತಾ

ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ ಮಾಡಿಸಲು ಆನ್‌ಲೈನ್ ಮೂಲಕ ಮುಂಗಡವಾಗಿ ಕಾಯ್ದಿರಿಸುವ ಆ್ಯಪ್ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದಾರೆ.
ಆನ್‌ಲೈನ್ ವ್ಯವಸ್ಥೆಯಾದರೆ ಭಕ್ತರಿಗೆ ಉಪಯೋಗವಾಗಲಿದೆ. ಆ್ಯಪ್ ಮೂಲಕ ಕೊಠಡಿಗಳನ್ನು ಕಾಯ್ದಿರಿಸಲೂ ಅವಕಾಶ ಕಲ್ಪಿಸಲಾಗುವುದು. ಶಕ್ತಿ ಯೋಜನೆ ಆರಂಭವಾದ ಬಳಿಕ ದೇವಾಲಯಗಳಿಗೆ ಬರುವ ಭಕ್ತರ ಪ್ರಮಾಣ ಹೆಚ್ಚಿದೆ. ‘ಎ’ ಮತ್ತು ‘ಬಿ’ ದರ್ಜೆಯ ದೇವಸ್ಥಾನಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು.
ತಾಯಂದಿರಿಗೆ ಶಿಶು ಆರೈಕೆ ಮಾಡಲು ಹಾಗೂ ಹಾಲು ಉಣಿಸಲು ಪ್ರತ್ಯೇಕ ‘ಅಮ್ಮ’ ಕೇಂದ್ರ ತೆರೆಯಬೇಕು. 65 ವರ್ಷ ದಾಟಿದ ಹಿರಿಯರಿಗೆ, ಅಂಗವಿಕಲರಿಗೆ ನೇರ ಮತ್ತು ಸರಾಗವಾಗಿ ದೇವರ ದರ್ಶನ ಪಡೆಯಲು ವ್ಯವಸ್ಥೆ ಮಾಡಬೇಕು. ಎಲ್ಲ ದೇವಸ್ಥಾನಗಳಲ್ಲಿ ಕುಡಿಯುವ ನೀರು, ಶೌಚಾಲಯ ಸಹಿತ ಮೂಲ ಸೌಲಭ್ಯಗಳಿರಬೇಕು. ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಈ ಎಲ್ಲ ಸುಧಾರಣೆ ಮಾಡಬೇಕು ಎಂದರು.
ದೇವಾಲಯಗಳ ಸುತ್ತ 100 ಮೀಟರ್ ಸುತ್ತಳತೆಯಲ್ಲಿ ಮದ್ಯ, ಸಿಗರೇಟು, ಗುಟ್ಕಾ ಹಾಗೂ ಇತರೆ ಮಾದಕ ವಸ್ತುಗಳ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶ ಹೊರಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅರ್ಜಿ ಸಲ್ಲಿಸಿದರೆ ಮಹಿಳೆಗೂ ಅರ್ಚಕ ಸ್ಥಾನ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಿಗೆ ಅರ್ಚಕರಾಗಲು ಮಹಿಳೆಯರು ಅರ್ಜಿ ಸಲ್ಲಿಸಿದರೆ ಅವರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.