ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆ ಇಷ್ಟು ದಿನ ಮೌನವಾಗಿರಲು ಕಾರಣ ಏನು ಗೊತ್ತಾ, ವೇದಿಕೆ ಮೇಲೆ ಸತ್ಯ ಬಿಚ್ಚಿಟ್ಟ ಖಾವಂದರು

 | 
ರುಿ

ಸೌಜನ್ಯಾ ಪ್ರಕರಣದ ಕಾರಣದಿಂದ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದ ವೀರೇಂದ್ರ ಹೆಗ್ಗಡೆಯವರು ಈದೀಗ ಧರ್ಮಸ್ಥಳದಲ್ಲಿ ನಡೆದ ಧರ್ಮ ಸಂರಕ್ಷಣಾ ಯಾತ್ರೆ ವೇಳೆ ಮಾತನಾಡಿದ ಅವರು, ಭಕ್ತರು ಧರ್ಮ ಸೈನಿಕರು. ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಎಂದರೆ ಅದಕ್ಕೆ ಮಂಜುನಾಥ ಸ್ವಾಮಿ, ಚಂದ್ರನಾಥ ಸ್ವಾಮಿ ಕಾರಣ. 

ದುಷ್ಟ ಶಕ್ತಿಗಳು ವಿಜೃಂಭಿಸುತ್ತಿವೆ. ನೀವೇ ಶಿಷ್ಟ ರಕ್ಷಣೆಯನ್ನ ಮಾಡಬೇಕು ಎಂದು ಭಕ್ತರಿಗೆ ತಿಳಿಸಿದರು.
ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಅಂದ್ರೆ ಅದಕ್ಕೆ ಮಂಜುನಾಥ ಸ್ವಾಮಿ, ಚಂದ್ರನಾಥ ಸ್ವಾಮಿ ಕಾರಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ  ಅವರು ಹೇಳಿದ್ದಾರೆ.ಕ್ಷೇತ್ರದ ಕಾರ್ಯವನ್ನು ಎಲ್ಲಾ ಜನರು ಮೆಚ್ಚಿದ್ದಾರೆ. 

ಇಲ್ಲಿಗೆ ಇಂದು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದೀರಿ. ನಮ್ಮ ವಾಹನವನ್ನ ಅಪೇಕ್ಷಿಸದೆ ನಿಮ್ಮ ಪರವಾಗಿ ಇದ್ದೇವೆ ಎಂದು ಬೆಂಬಲ ನೀಡಿದ್ದೀರಿ. ದೇಶವನ್ನ ಹಾಳು ಮಾಡಬೇಕಾದರೆ, ಮೊದಲು ಸಂಸ್ಕೃತಿಯನ್ನ ನಾಶ ಮಾಡುತ್ತಾರೆ. ನಮ್ಮ ಕ್ಷೇತ್ರಕ್ಕೆ ಬಂದ ಅಪಾಯ ಬೇರೆ ಕ್ಷೇತ್ರಗಳಿಗೂ ಬರಬಹುದು ಎಂದು ಕಳವಳ ವ್ಯಕ್ತಪಡಿಸಿದರು. ವಿಷವನ್ನು ಸೇವಿಸುವ ಶಕ್ತಿ ಎಲ್ಲರಿಗೂ ಬರುವುದಿಲ್ಲ. 

ಇದು ದೇವರ ಪರೀಕ್ಷೆ. ಮಳೆ ಬರುತ್ತಿದೆ, ಆದರೆ ಯಾರು ಸಹ ಓಡುತ್ತಿಲ್ಲ, ನಿಂತಿದ್ದೀರಿ. ವೈಯಕ್ತಿಕವಾದ ನಿಂದನೆಯಿಂದ ಸಂಸ್ಕೃತಿ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನೀವೆಲ್ಲರೂ ಸ್ವಾಸ್ಥ್ಯ ಸಂಕಲ್ಪವನ್ನ ಮಾಡಬೇಕು ಎಂದು ಕರೆ ನೀಡಿದರು. ಸೌಜನ್ಯ ಪ್ರಕರಣದ ಆರೋಪಗಳ ಬಗ್ಗೆ ಮೌನ ಮುರಿದ ವೀರೇಂದ್ರ ಹೆಗ್ಗಡೆ ಅವರು, ಯಾವುದೇ ರೀತಿಯ ತನಿಖೆಯಾಗಲಿ. 

ನಾವೂ ಸಿದ್ಧ. ದಾಖಲೆಯಿಲ್ಲದೆ ಆರೋಪ ಮಾಡುತ್ತಿದ್ದಾರೆ. ನಿಮ್ಮ ದೀಕ್ಷೆಯಿಂದ ಈ ಎಲ್ಲಾ ಕಷ್ಟಗಳೂ ದೂರವಾಗಲಿ. ಧರ್ಮಸ್ಥಳಕ್ಕೆ ಆಪತ್ತು ಬಂದಾಗ ನೀವು ಕೈಗೊಂಡ ಈ ಪ್ರಾರ್ಥನೆಯನ್ನ ಸ್ವಾಮಿಯ ಪಾದಕ್ಕೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.