ಡಾI ವಿಷ್ಣುವರ್ಧನ್ ಪತ್ನಿಗೆ ಪಡೆಯಲಾಗಿದ ಪರಿಸ್ಥಿತಿ, ಅಪ್ಪಾಜಿ ಕುಟುಂಬದಲ್ಲಿ ಮತ್ತೊಂದು ನೋವು

 | 
ಕ್

ದಿವಂಗತ ನಟ ವಿಷ್ಣುವರ್ಧನ್ ಪತ್ನಿ ಹಾಗೂ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆಯಂತೆ. ಭಾರತಿ ವಿಷ್ಣುವರ್ಧನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅಳಿಯ ಅನಿರುದ್ಧ್ ಈ ಹಿಂದೆ ಮಾಹಿತಿ ನೀಡಿದ್ದರು. ಹೌದು ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಇತ್ತೀಚಿಗಷ್ಟೇ ಹಿರಿಯ ನಟಿ ಲೀಲಾವತಿ ಇಹಲೋಹ ತ್ಯಜಿಸಿದ್ರು. ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರಿಗೆ ಅನಾರೋಗ್ಯ ಉಂಟಾಗಿರುವ ಸುದ್ದಿ ಕೇಳಿ ಸ್ಯಾಂಡಲ್​ವುಡ್​ ಮಂದಿ ಶಾಕ್ ಆಗಿದ್ದಾರೆ. ಮಂಡಿ ನೋವು ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ ಹಾಗಾಗಿ ಅವರು ನಡೆಯಲು ಕೂಡ ಸಾಧ್ಯವಾಗುತ್ತಿಲ್ಲ ಎಂದು ಅವರ ಮಗಳು ಕೀರ್ತಿ ಹೇಳಿದ್ದಾರೆ.

ಮಂಡಿನೋವಿನಿಂದ ಭಾರತಿ ಅಮ್ಮ ಹಾಸಿಗೆ ಹಿಡಿದಿದ್ದಾರೆ. ಅವರಿಗೆ ಊಟವನ್ನು ಹೆಚ್ಚಾಗಿ ತಿನ್ನಲು ಆಗ್ತಿಲ್ಲ. ನಿಶಕ್ತರಾಗಿದ್ದಾರೆ ಎಂದು ಅನಿರುದ್ಧ್ ಮಾಹಿತಿ ನೀಡಿದ್ದಾರೆ. ಕೆಲ ದಿನಗಳಿಂದ ಭಾರತೀ ವಿಷ್ಣುವರ್ಧನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. 2 ತಿಂಗಳಿಂದ ಅವರು ಎಲ್ಲಿಗೂ ಹೋಗಿಲ್ಲ. ಮನೆಯಲ್ಲಿಯೇ ಬೆಡ್ ರೆಸ್ಟ್ ತೆಗೆದುಕೊಳ್ತಿದ್ದಾರೆ ಎಂದು ಅನಿರುದ್ಧ್ ಹೇಳಿದ್ದಾರೆ.

ವಯೋಸಹಜ ಸಮಸ್ಯೆಗಳಿಂದ ನಟಿ ಭಾರತಿ ವಿಷ್ಣುವರ್ಧನ್ ಬಳಲುತ್ತಿದ್ದಾರೆ. ಎಲ್ಲರ ಹಾರೈಕೆಯಿಂದ ಬೇಗ ಗುಣ ಮುಖರಾಗ್ತಾರೆ ಎನ್ನುವ ನಂಬಿಕೆ ನಮಗಿದೆ ಎಂದು ಕೀರ್ತಿ  ಹೇಳಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಐದೂ ಭಾಷೆಗಳಲ್ಲಿಯೂ ನಟಿಸಿರುವ ಭಾರತಿ ವಿಷ್ಣುವರ್ಧನ್​ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಕನ್ನಡದಲ್ಲಿ ನಟರಾದ ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ವಿಷ್ಣುವರ್ಧನ್, ಅನಂತನಾಗ್, ರಾಜೇಶ್ ಸಿನಿಮಾಗೆ ಜೋಡಿಯಾಗಿ ನಟಿಸಿ ಸೈ ಎನಿಸಿಕೊಂಡವರಿವರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.