ಡ್ರೋನ್ ಪ್ರತಾಪ್ ಹಾಗೂ ಸಂಗೀತ ಆಸ್ಪತ್ರೆಗೆ ದಾಖಲು, ಇವತ್ತಿನ ಶೋ ನಾಳೆಗೆ ಮುಂದೂಡಿಕೆ

 | 
Hs

ನಿನ್ನೆ ದಿಢೀರ್ ನೆ ದೊಡ್ಮನೆಯಿಂದ ಡ್ರೋನ್ ಪ್ರತಾಪ್  ಮತ್ತು ಸಂಗೀತಾ ಶೃಂಗೇರಿ ಹೊರ ಬಂದಿದ್ದಾರೆ. ಟಾಸ್ಕ್ ವೊಂದರಲ್ಲಿ ಅವರ ಮುಖಕ್ಕೆ ಕೆಮಿಕಲ್ ನೀರು ಹಾಕಿದ ಕಾರಣದಿಂದಾಗಿ ಅವರು ಅಸ್ವಸ್ಥಗೊಂಡಿದ್ದರು ಎಂದು ಹೇಳಲಾಗುತ್ತಿದೆ. ಕಣ್ಣಿಗೆ ಮತ್ತು ಮೂಗು, ಬಾಯಿಗೆ ನೀರು ಬಿದ್ದ ಪರಿಣಾಮದಿಂದ ಡ್ರೋನ್ ಮತ್ತು ಸಂಗೀತಾ ಒದ್ದಾಡಿದ್ದಾರೆ ಎನ್ನುವ ಮಾಹಿತಿ ಇದೆ. ಅವರೀಗ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಎರಡು ದಿನಗಳಿಂದ ಗಂಧರ್ವರು ಮತ್ತು ರಾಕ್ಷಸರು ಎಂದು ಎರಡು ಗುಂಪುಗಳಾನ್ನಾಗಿ ಮಾಡಿ, ಹಲವು ಟಾಸ್ಕ್ ಗಳನ್ನು ನೀಡಲಾಗಿದೆ. ಈ ಟಾಸ್ಕ್ ನಲ್ಲಿ ಡ್ರೋನ್ ಮತ್ತು ಸಂಗೀತಾ ಗಾಯ ಮಾಡಿಕೊಂಡಿದ್ದಾರೆ ಎನ್ನುವುದು ಲೇಟೆಸ್ಟ್ ಅಪ್ ಡೇಟ್. ಈ ವಿಷಯದ ಕುರಿತಂತೆ ವಾಹಿನಿಯಾಗಲಿ ಅಥವಾ ಸಂಬಂಧಿಸಿದವರಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ನ್ಯೂಸ್ ಭರ್ಜರಿ ಸೇಲ್ ಆಗುತ್ತಿದೆ.

ರಾಕ್ಷಸರು ಮತ್ತು ಗಂಧರ್ವರ ಗುಂಪುಗಳ ನಡುವೆ ಭಾರೀ ಕದನವೇ ನಡೆಯುತ್ತಿದೆ. ಹಲವರು ಟಾರ್ಗೆಟ್ ಮಾಡಿಕೊಂಡು ಆಡುತ್ತಿದ್ದಾರೆ. ಅದರಲ್ಲೂ ಸಂಗೀತಾ ಮತ್ತು ವಿನಯ್ ಮಧ್ಯ, ಕಾರ್ತಿಕ್ ಮತ್ತು ವಿನಯ್ ಮಧ್ಯ, ಸಂಗೀತಾ ಮತ್ತು ನಮ್ರತಾ ಮಧ್ಯ ಹೀಗೆ ವೈಯಕ್ತಿಕವಾಗಿ ಆಟಗಳನ್ನು ಆಡುತ್ತಿದ್ದಾರೆ. ಒಬ್ಬರಿಗೊಬ್ಬರನ್ನು ಕೆಣಕುತ್ತಿದ್ದಾರೆ. ಇದು ಎಲ್ಲೋ ಒಂದು ಕಡೆ ಅನಾಹುತ ಮಾಡಲಿದೆ ಎಂದೇ ಅಂದಾಜಿಸಲಾಗಿತ್ತು. ಬಹುಶಃ ಅದೇ ಆಗಿರಬಹುದು.

ಕೆಮಿಕಲ್ ನೀರಿನ ಪರಿಣಾಮದಿಂದಾಗಿ ಸದ್ಯಕ್ಕೆ ಡ್ರೋನ್ ಮತ್ತು ಸಂಗೀತಾರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ತನಿಷಾರನ್ನು ಹೀಗೆಯೇ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆನಂತರ ಬಿಗ್ ಬಾಸ್  ಮನೆಗೆ  ವಾಪಸ್ಸು ಕರೆತರಲಾಗಿತ್ತು. ಈ ಇಬ್ಬರನ್ನೂ ಹಾಗೆಯೇ ಮಾಡುವ ಸಾಧ್ಯತೆ ಇದೆ ಎಂದು ಬಿಗ್ ಬಾಸ್ ಮನೆಯ ಪ್ರಕಟಣೆ ಅಲ್ಲಿ ತಿಳಿಸಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.