ಬೆಳಗ್ಗಿನ ಜಾವ ಚಿತ್ರರಂಗಕ್ಕೆ ಬರಸಿ.ಡಿಲು, ನಮ್ಮೆಲ್ಲರ ಹಾಸ್ಯ ಕಲಾವಿದ ಇ.ಹಲೋಕ

 | 
Hj

ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ಹಲವಾರು ಕಲಾವಿದರು ಇಹಲೋಕ ತ್ಯಜಿಸಿದ್ದಾರೆ. ಇದೀಗ ಜನಪ್ರಿಯ ಹಾಸ್ಯನಟ  ಬೋಂಡಾ ಮಣಿ ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಡಿಸೆಂಬರ್ 23 ರಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರ ಹಠಾತ್ ನಿಧನ ಕುಟುಂಬಕ್ಕೆ ಮತ್ತು ಫ್ಯಾನ್ಸ್‌ಗೆ ಶಾಕ್ ಕೊಟ್ಟಿದೆ. 

ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ 60 ವರ್ಷದ ನಟ ಬೋಂಡಾ ಮಣಿ ಅವರು ಪೊಜಿಚಲೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮೂರ್ಛೆ ತಪ್ಪಿದ್ದರು. ಕೂಡಲೇ ಆಸ್ಪತ್ರೆಗೆ ಸೇರಿಸುವ ಮುನ್ನವೇ ಬೋಂಡಾ ಮಣಿ ವಿಧಿವಶರಾಗಿದ್ದರು.

ಇನ್ನು ಬೋಂಡಾ ಮಣಿ ಅವರ ಪಾರ್ಥಿವ ಶರೀರವನ್ನು ಪೊಜಿಚಲೂರಿಯ ಅವರ ನಿವಾಸದಲ್ಲಿ ಇರಿಸಲಾಗಿತ್ತು. ನಿನ್ನೆ ಸಂಜೆ 5ರ ಸುಮಾರಿಗೆ ಕ್ರೋಂಪೇಟೆಯಲ್ಲಿರುವ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.

ನಟ ಧನುಷ್  ಮತ್ತು ವಿಜಯ್ ಸೇತುಪತಿ ಅವರು ಬೋಂಡಾ ಮಣಿ ಅವರ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕವಾಗಿ ಸಹಾಯ ಮಾಡಿದ್ದರು. ಬೋಂಡಾ ಮಣಿ ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟರಾಗಿದ್ದು, 270ಕ್ಕೂ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಇದೀಗ ತಮಿಳು ಬೋಂಡಾ ಮಣಿ ಅವರ ನಿಧನಕ್ಕೆ ಫ್ಯಾನ್ಸ್ ಸೇರಿದಂತೆ ಸಿನಿಮಾ ತಾರೆಯರು ಗಣ್ಯರು ಸಂತಾಪ ಸೂಚಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.