ಚುನಾವಣೆ ತಂದ ಸಂಕಷ್ಟ, ನಮ್ಮೆಲ್ಲರ ನೆಚ್ಚಿನ ಶಿವಣ್ಣ ಮೇಲೆ ದೂರು ದಾಖಲು

 | 
ಕಗಾಗಾ

ನಟ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಪರ ಶಿವಮೊಗ್ಗದಲ್ಲಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಇದೇ ವಿಚಾರವಾಗಿ ಶಿವರಾಜ್ ಕುಮಾರ್ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಪತ್ನಿ ಪರ ಕ್ಯಾಂಪೇನ್ ಮಾಡುತ್ತಿರುವ ನಟ ಶಿವರಾಜ್ ಕುಮಾರ್ ಅವರ ಭಾವಚಿತ್ರವುಳ್ಳ ಫ್ಲೆಕ್ಸ್, ಸಿನಿಮಾ ಪೋಸ್ಟರ್, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.ನಟ ಶಿವಣ್ಣ ನಟಿಸಿರುವ ಸಿನಿಮಾ, ಜಾಹೀರಾತುಗಳಿಗೆ ನಿರ್ಬಂಧ ಹೇರುವಂತೆ ಮನವಿ ಮಾಡಿಕೊಳ್ಳಲಾಗಿದೆ.


ಹೌದು, ಚುನಾವಣಾ ಕಾರ್ಯದಲ್ಲಿ ತೊಡಗಿರುವ ನಟ ಶಿವರಾಜ್ ಕುಮಾರ್ ಅವರ ವಿರುದ್ಧ ರಾಜ್ಯ ಚುನಾವಣೆ ಆಯೋಗದಲ್ಲಿ ದೂರು ದಾಖಲಿಸಲಾಗಿದೆ. ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಪತ್ನಿ ಪರ ಕ್ಯಾಂಪೇನ್ ಮಾಡುತ್ತಿರುವ ನಟ ಶಿವರಾಜ್ ಕುಮಾರ್ ಅವರ ಭಾವಚಿತ್ರವುಳ್ಳ ಫ್ಲೆಕ್ಸ್, ಸಿನಿಮಾ ಫೋಸ್ಟರ್, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

ಪತ್ನಿಯ ಪ್ರಚಾರಕ್ಕೆ ಅವರು ಸಾಥ್ ನೀಡಿದ್ದ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಒಬಿಸಿ ಯುವ ಮೋರ್ಚಾ ದೂರು ದಾಖಲಿಸಿದೆ. ಪತ್ನಿ ಪರ ಭದ್ರಾವತಿಯಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಿದ್ದರು. ಪ್ರಚಾರ ಕಾರ್ಯದಲ್ಲಿ ಸಚಿವ ಮಧು ಬಂಗಾರಪ್ಪ, ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.


( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.